SSLC ಮತ್ತು PUC ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ರಾಜ್ಯ

ಕರ್ನಾಟಕ:

ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಕೆಎಸ್ ಆರ್ ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅನುಮತಿಸಿರುವ ಕುರಿತು ವ್ಯವಸ್ಥಾಪಕ ನಿರ್ದೇಶಕರು ಉಲ್ಲೇಖ-2ರನ್ವಯ ಅನುಮೋದನೆ ನೀಡಿದ್ದಾರೆ

ಪ್ರಸಕ್ತ ವರ್ಷದಲ್ಲಿ 01.03.2025ರಿಂದ ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ 21.03.2025 ರಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಸಂಬಂಧ ವಿದ್ಯಾರ್ಥಿಗಳು ಪರೀಕ್ಷಾ ಸಂದರ್ಭದಲ್ಲಿ ಅವರ ವಿದ್ಯಾಸಂಸ್ಥೆ ಹೊರತುಪಡಿಸಿ ಬೇರೆ ವಿದ್ಯಾಸಂಸ್ಥೆಗೆ ತೆರಳಬೇಕಾಗಿರುತ್ತದೆ. ಪರೀಕ್ಷಾ ಕೇಂದ್ರಗಳು ಬೇರೆಯಾಗಿರುವುದರಿಂದ ಆಯಾ ಕೇಂದ್ರಗಳಿಗೆ ತೆರೆಳಿಯೇ ಪರೀಕ್ಷೆ ನೀಡಬೇಕಾಗುತ್ತದೆ. ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರೆಳಲು ಅನುಕೂಲವಾಗುವಂತೆ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ

ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ. KSRTC ಯ ಎಲ್ಲಾ ಘಟಕ ಮತ್ತು ಬಸ್‌ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಈ ಮಾಹಿತಿಯನ್ನು ಪ್ರದರ್ಶಿಸಿ ಕ್ರಮಗಳನ್ನು ಜಾರಿಗೊಳಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ.

Author:

...
Editor

ManyaSoft Admin

Ads in Post
share
No Reviews