ರಾಜ್ಯ:
SSLC ಪರೀಕ್ಷೆ ಅನ್ನೋದು ವಿದ್ಯಾರ್ಥಿಗಳ ಭವಿಷ್ಯದ ಬಹಳ ದೊಡ್ಡ ತಿರುವು. ರಾಜ್ಯದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು, ಪೋಷಕರು ಕಾಯುತ್ತಿದ್ದ ಸಮಯ ಬಂದೇ ಬಿಟ್ಟಿದೆ. ನಾಳೆ ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡುವುದಾಗಿ ಅಧಿಕೃತ ಮಾಹಿತಿ ನೀಡಿದೆ.
ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ರಾಜ್ಯದಾದ್ಯಂತ ನಡೆದ SSLC ಪರೀಕ್ಷೆಯಲ್ಲಿ ಈ ಬಾರಿ ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಇದೀಗ ಮೌಲ್ಯಮಾಪನ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಕರ್ನಾಟಕ ಪರೀಕ್ಷಾ ಮಂಡಳಿ ನಾಳೆ ಬೆಳಗ್ಗೆ 11 ಗಂಟೆ 30 ನಿಮಿಷಕ್ಕೆ ಫಲಿತಾಂಶ ಪ್ರಕಟಿಸಲಿದೆ ಎಂದು ಅಧಿಕೃತವಾಗಿ ತಿಳಿಸಿದೆ.
ನಾಳೆ ಬೆಳಗ್ಗೆ 11-30 ಗಂಟೆಗೆ ಶಿಕ್ಷಣ ಸಚಿವರು SSLC ಫಲಿತಾಂಶವನ್ನು ಪ್ರಕಟ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12-30 ಗಂಟೆಯ ನಂತರ SSLC ಫಲಿತಾಂಶವನ್ನು ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ.
ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ಸಂಖ್ಯೆ ಬಳಸಿ ಈ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪರಿಶೀಲಿಸಬಹುದು. ಫಲಿತಾಂಶದ ನಂತರ ವಿದ್ಯಾರ್ಥಿಗಳಿಗೆ ಮೌಲ್ಯಮಾಪನದ ಪ್ರತಿಗಳನ್ನು ಪಡೆಯುವ ಹಾಗೂ ಪುನರ್ಮೌಲ್ಯಮಾಪನಕ್ಕೆ ಅರ್ಜಿ ಹಾಕುವ ಅವಕಾಶವೂ ಒದಗಿಸಲಾಗುತ್ತದೆ.