ದ್ವಿತೀಯ ಪಿಯುಸಿ ಪರೀಕ್ಷೆಯು ಇಂದು ಮುಕ್ತಾಯಗೊಂಡಿದ್ದು, ಈ ಬೆನ್ನಲ್ಲೇ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರಿಕ್ಷೆಗಳು ಆರಂಭವಾಗಲಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ದತೆ ಮಾಡಿಕೊಂಡಿದೆ. 3 ತಿಂಗಳ ಹಿಂದೆಯೇ SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಮಂಡಳಿ ಬಿಡುಗಡೆ ಮಾಡಿದೆ. 2025 ರ SSLC ಪರೀಕ್ಷೆಯು ಮಾರ್ಚ್ 21 ರಿಂದ ಶುರುವಾಗಿ ಏಪ್ರಿಲ್ 4 ರ ತನಕ ನಡೆಯಲಿವೆ. ಮೊದಲ ದಿನವೇ ವಿದ್ಯಾರ್ಥಿಗಳು ಭಾಷಾ ವಿಷಯದ ಪರೀಕ್ಷೆಯನ್ನು ಎದುರಿಸಲಿದ್ದಾರೆ.
ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೇ ಧೈರ್ಯದಿಂದ ಪರೀಕ್ಷೆ ಎದುರಿಸಬೇಕು. ಯಾವ ದಿನ ಯಾವ ವಿಷಯದ ಪರೀಕ್ಷೆ ಇದೆ ಎನ್ನುವುದನ್ನ ಮನೆಯಲ್ಲೇ ಒಂದಿನ ಮೊದಲೇ ತಿಳಿದುಕೊಂಡು ಪರೀಕ್ಷೆಗೆ ತೆರಳಬೇಕು. ಮೊದಲ ದಿನ ಪ್ರಥಮ ವಿಷಯಗಳಾದ ಕನ್ನಡ, ತೆಲುಗು, ಹಿಂದಿ, ಪರಾಠಿ, ತಮಿಳು, ಉರ್ದು, ಇಂಗ್ಲಿಷ್ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ನಡೆಯಲಿವೆ. ಇನ್ನು ಪರೀಕ್ಷೆ ಅಕ್ರಮ ತಡೆಯಲು ಇಲಾಖೆ ಕಠಿಣ ಕ್ರಮ ತೆಗೆದುಕೊಂಡಿದೆ. ಪರೀಕ್ಷೆ ನಡೆಯುವ ರೂಮ್ಗಳಲ್ಲಿ ವೆಬ್ಕಾಸ್ಟಿಂಗ್ ಹಾಗೂ ಹೊರಗೆ ಸಿಸಿಟಿವಿ ಕ್ಯಾಮೆರಾಗಳ ಹದ್ದಿನ ಕಣ್ಣು ಇರುತ್ತದೆ.