ಉಡುಪಿ:
ಕರಾವಳಿ ಜಿಲ್ಲೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ಪ್ರತಿಭಟನೆ ನಡೆಸಿದೆ. ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿ, ಜಿಲ್ಲೆಗೆ ಮಲತಾಯಿ ಧೋರಣೆ ಅನುಸರಿಸಿದ್ದಾರೆಂದು ಬಿಜೆಪಿ ಖಂಡಿಸಿತು.
ಧರ್ಮಾಧಾರಿತವಾಗಿ ಸಂವಿಧಾನ ಬಾಹಿರವಾಗಿ, ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಿದೆ ಎಂದು ಸರ್ಕಾರದ ಸಂವಿಧಾನ ವಿರೋಧಿ ನಡೆಯ ವಿರುದ್ಧ ಘೋಷಣೆಗಳನ್ನು ಕೂಗಲಾಯ್ತು. ಬಿಜೆಪಿ ಕಚೇರಿಯಿಂದ ಕಲ್ಸಂಕದವರೆಗೆ ಪಾದಯಾತ್ರೆ ಮಾಡಿ ಪ್ರತಿಭಟಿಸಲಾಯಿತು.