ರಾಜ್ಯ : ಇಂದಿನಿಂದ ರಾಜ್ಯದಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ–2 ಆರಂಭಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ನಡೆಸುತ್ತಿರುವ ಈ ಪರೀಕ್ಷೆ ಮೇ 26ರಿಂದ ಜೂನ್ 2ರವರೆಗೆ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಒಟ್ಟು 967 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯುತ್ತಿದ್ದು, ಇದಕ್ಕಾಗಿ 3.16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಇನ್ನು ಎಸ್ಎಸ್ಎಲ್ಸಿ ಪರೀಕ್ಷೆ–1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಇಂದು ಪ್ರಥಮ ಭಾಷಾ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಯ ಸಮಯ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ನಿಗದಿಯಾಗಿದ್ದು, ವಿಧ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆಗಳು ಕಲ್ಪಿಸಲಾಗಿದೆ.
SSLC ಪರೀಕ್ಷೆ–1 ರಲ್ಲಿ 8,42,174 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರಲ್ಲಿ 5,24,984 ಮಂದಿ ಪಾಸ್ ಆಗಿದ್ದರೆ, 3,17,189 ಮಂದಿ ಅನುತ್ತೀರ್ಣರಾಗಿದ್ದರು. ಈ ಪೈಕಿ ಬಹುತೇಕ ಮಂದಿ ಈಗ ಪರೀಕ್ಷೆ–2ಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ ಇಲಾಖೆ ಪರೀಕ್ಷಾ ವ್ಯವಸ್ಥೆಯಲ್ಲಿ ಯಾವುದೇ ಗೊಂದಲವಿಲ್ಲದಂತೆ ತಯಾರಿ ಮಾಡಿದ್ದು, ವಿದ್ಯಾರ್ಥಿಗಳಿಗಾಗಿ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.