ದಾವಣಗೆರೆ :
ವಿದ್ಯಾರ್ಥಿನಿಯೋರ್ವಳು ಮೊಬೈಲ್ ನಲ್ಲಿ ಮಾತನಾಡುತ್ತ ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿಯೋರ್ವಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ರೈಲು ನಿಲ್ದಾಣದಲ್ಲಿ ನಡೆದಿದೆ. ಬಳ್ಳಾರಿ ಮೂಲದ 23 ವರ್ಷದ ಶ್ರಾವಣಿ ಎಂಬುವರು ಮೃತ ದುರ್ದೈವಿಯಾಗಿದ್ದಾರೆ.
ಮೃತ ವಿದ್ಯಾರ್ಥಿನಿಯು ಮೈಸೂರಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದು, ಹರಿಹರದಲ್ಲಿನ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆಂದು ಬಂದಿದ್ದಾಗ ಈ ಅವಘಡ ಸಂಭವಿಸಿದೆ. ಮೊಬೈಲ್ ನಲ್ಲಿ ಮಾತನಾಡುತ್ತ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ತಲೆ ಭಾಗಕ್ಕೆ ತೀವ್ರ ಪೆಟ್ಟು ಬಿದ್ದಿದ್ದು, ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ರೈಲ್ವೆ ವಿಭಾಗದ ಪೊಲೀಶರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ಈ ಸಂಬಂಧ ಹರಿಹರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.