ದೇಶ : ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರು ಆಪರೇಷನ್ ಸಿಂಧೂರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಲ್ ಖುರೇಷಿಯವರ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಅವರು ಸಲ್ಲಿಸಿದ್ದ ಕ್ಷಮೆಯಾಚನೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಪ್ರಕರಣವನ್ನು ತೀವ್ರಗೊಳಿಸಿರುವ ನ್ಯಾಯಾಲಯ, ವಿಶೇಷ ತನಿಖಾ ತಂಡ (SIT) ರಚಿಸುವಂತೆ ಆದೇಶ ನೀಡಿದೆ.
ನ್ಯಾಯಮೂರ್ತಿ ಸೂರ್ಯ ಕಾಂತ್ ಅವರಿದ್ದ ಏಕ ಸದಸ್ಯ ಪೀಠ, ವಿಜಯ್ ಶಾ ಅವರ ಕ್ಷಮೆಯಾಚನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. "ನೀವು ಯಾವ ರೀತಿ ಕ್ಷಮೆಯಾಚಿಸಿದ್ದೀರಿ? ಇದರಲ್ಲಿ ಕ್ಷಮೆಯಾಚನೆಗೆ ಸ್ವಲ್ಪ ಅರ್ಥವಿದೆಯೆ? ಕೆಲವೊಮ್ಮೆ ಜನರು ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಮಾತ್ರ ಸೌಮ್ಯ ಭಾಷೆ ಬಳಸುತ್ತಾರೆ. ನೀವು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ," ನ್ಯಾಯಾಲಯ ಹೇಳಿದೆ ಎಂಬ ಕಾರಣಕ್ಕೆ ಕ್ಷಮೆ ಕೇಳಿದ್ದೀರಿ, ಇಲ್ಲಿಯವರೆಗೆ ನಿಮ್ಮ ಅಸಭ್ಯ ಹೇಳಿಕೆಗಳಿಗೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸಲು ನಿಮ್ಮನ್ನು ಏನು ತಡೆದಿತ್ತು ಎಂದು ಪೀಠ ಛೀಮಾರಿ ಹಾಕಿತು.
ನ್ಯಾಯಾಲಯ ಈಗ ಮಧ್ಯಪ್ರದೇಶ ಸರ್ಕಾರಕ್ಕೆ ಸ್ಪಷ್ಟ ಸೂಚನೆ ನೀಡಿದ್ದು, ಮಂಗಳವಾರ ಬೆಳಗ್ಗೆ ಮೂರು ಸದಸ್ಯರೊಂದಿಗೆ ವಿಶೇಷ ತನಿಖಾ ತಂಡವನ್ನು ರಚಿಸಬೇಕು. ಈ ಎಸ್ಐಟಿಗೆ ಕನಿಷ್ಠ ಒಬ್ಬ ಮಹಿಳಾ ಐಪಿಎಸ್ ಅಧಿಕಾರಿ ಇದ್ದೇ ಇಬೇಕೆಂದು ಕೋರ್ಟ್ ಶರತ್ತು ವಿಧಿಸಿದೆ. ತನಿಖಾ ವರದಿಯನ್ನು ಮೇ 28ರೊಳಗೆ ಸಲ್ಲಿಸಲು ಸೂಚನೆ ನೀಡಲಾಗಿದೆ.
ವಿಜಯ್ ಶಾ ಅವರಿಗೆ ತಾತ್ಕಾಲಿಕವಾಗಿ ಬಂಧನದಿಂದ ವಿನಾಯಿತಿ ನೀಡಿದ ಪೀಠ, ಆದರೆ ಇದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ, ಎಂದು ಎಚ್ಚರಿಸಿದೆ. ಈ ಪ್ರಕರಣವನ್ನು ನಿಭಾಯಿಸುವ ಬಗ್ಗೆ ಮಧ್ಯಪ್ರದೇಶ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ. ನಿಮಗೆ ಇದೊಂದು ಅಗ್ನಿ ಪರೀಕ್ಷೆ ಎಂದು ಸರ್ಕಾರಕ್ಕೆ ಸೂಚಿಸಿದೆ.