Mandya : ಮದ್ದೂರಿನಲ್ಲಿ ತುಂಬು ಗರ್ಭಿಣಿ ಮಹಿಳೆಯ ಅನುಮಾನಾಸ್ಪದ ಸಾವು

MANDYA: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತುಂಬು ಗರ್ಭಿಣಿ ಮಹಿಳೆಯೋರ್ವಳು ಕುತ್ತಿಗೆಗೆ ವೇಲ್ ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು. ಹಲವು ಅನುಮಾನಗಳಿಗೆ ಕಾರಣವಾಗಿದೆ. ಆಶಾ (19) ಎಂಬ ಮಹಿಳೆ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕಾಮಗೆರೆ ಗ್ರಾಮದ ನಿವಾಸಿಯಾದ ಚಂದನ್ ಗೌಡ ಮತ್ತು ಆಶಾ, ಕುಟುಂಬದ ವಿರೋಧದ ನಡುವೆಯೂ ಒಂದು ವರ್ಷದ ಹಿಂದೆ ಮದುವೆಯಾಗಿದ್ದರು. ಮದುವೆಯ ಬಳಿಕ ದಂಪತಿ ಮದ್ದೂರು ಪಟ್ಟಣದ ಚನ್ನೆಗೌಡ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ನಾಳೆ ಆಶಾ ಶ್ರೀಮಂತ ಕಾರ್ಯಕ್ರಮವಿತ್ತು, ಆದರೆ ಇದೀಗ ಆಶಾ ಕುತ್ತಿಗೆಗೆ ವೇಲ್ ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಈ ಬಗ್ಗೆ ಮೃತ ಮಹಿಳೆಯ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಪತಿಯ ಮೇಲೆ ಮದ್ದೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಮದ್ದೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇನ್ನು ಮೃತದೇಹವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಮೃತ ಮಹಿಳೆಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

 

Author:

...
Sushmitha N

Copy Editor

prajashakthi tv

share
No Reviews