Sira : ಶಿರಾದಲ್ಲಿ ಮುಸ್ಲಿಂ ಬಾಂಧವರಿಂದ ಬಕ್ರೀದ್ ಆಚರಣೆ | ಶುಭಕೋರಿದ ಟಿ.ಬಿ ಜಯಚಂದ್ರ

SIRA : ಶಿರಾ ತಾಲೂಕಿನಾದ್ಯಂತ ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಆಚರಿಸಲಾಗ್ತಿದೆ, ಬೆಳಗ್ಗೆಯೇ ಮುಸ್ಲಿಂರು ಒಟ್ಟಾಗಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ, ಪರಸ್ಪರ ಶುಭಕೋರಿದರು. ಬೆಳಗ್ಗೆಯೇ ಶಿರಾ ನಗರದ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯ ಮುಸ್ಲಿಂ ಬಾಂಧವರು ಸೇರಿದ್ದು, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಧರ್ಮ ಗುರುಗಳು ಹಬ್ಬದ ಸಂದೇಶ ಸಾರಿ, ಬಕ್ರೀದ್ ಹಬ್ಬದ ಆಚರಣೆ ಹಾಗೂ ದಾನ-ಧರ್ಮದ ಮಹತ್ವ ಕುರಿತು ಬೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೆ ಸಹೋದರರಂತೆ ಬಾಳುವಂತೆ ಕರೆ ನೀಡಿದರು.

ಸಾಮೂಹಿಕ ಪ್ರಾರ್ಥನೆ ಬಳಿಕ ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಟಿ ಬಿ ಜಯಚಂದ್ರ ಟೋಪಿ ಧರಿಸಿ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು. ಈ ವೇಳೆ ಧರ್ಮಗುರುಗಳು ಜಯಚಂದ್ರ ಅವರಿಗೆ ಸನ್ಮಾನ ಮಾಡಿದರು. ಇನ್ನು ಸಾಮೂಹಿಕ ಪ್ರಾರ್ಥನೆಯಲ್ಲಿ ಮಕ್ಕಳು ಕೂಡ ಭಾಗಿಯಾಗಿ ನಮಾಜ್ ಮಾಡಿದರು. ಬಕ್ರೀದ್ ಹಬ್ಬದ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

Author:

...
Sushmitha N

Copy Editor

prajashakthi tv

share
No Reviews