ಮೈಸೂರು ಸ್ಯಾಂಡಲ್‌ ಸೋಪ್‌ ಗೆ ಹೊಸ ರಾಯಭಾರಿಯಾಗಿ ತಮನ್ನಾ ಆಯ್ಕೆ

ಮೈಸೂರು : ನಟಿ ತಮನ್ನಾ ಭಾಟಿಯಾ ತನ್ನ ನಟನೆಯ ಮೂಲಕ ದೇಶಾದ್ಯಂತ ಜನಪ್ರಿಯತೆಯನ್ನು ಗಳಿಸಿದ್ದಾರೆ. ತಮನ್ನಾ ಇತ್ತೀಚೆಗೆ ಹಾಡುಗಳ ಮೂಲಕ ಪ್ರೇಕ್ಷಕರಿಗೆ ಮತ್ತಷ್ಟು ಹತ್ತಿರ ಆಗಿದ್ದಾರೆ. ಕನ್ನಡದಲ್ಲಿ ʼಜಾಗ್ವಾರ್‌ʼ ಹಾಗೂ ʼಕೆಜಿಎಫ್”‌ ಸಿನಿಮಾದ ಹಾಡುಗಳಲ್ಲಿ ಕಾಣಿಸಿಕೊಂಡ ತಮನ್ನಾ ಕರ್ನಾಟಕದ ಸರ್ಕಾರದ ಒಡೆತನದಲ್ಲಿರುವ ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರಾಯಭಾರಿ ಆಯ್ಕೆಯಾಗಿದ್ದಾರೆ.

ಮೈಸೂರು ಸ್ಯಾಂಡಲ್‌ ಸೋಪ್‌ ಬ್ರ್ಯಾಂಡ್‌ಗೆ ರಾಯಭಾರಿಯಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿಕೊಂಡಿದ್ದು, ಕೋಟಿ ಕೋಟಿ ಸಂಭಾವನೆಯನ್ನು ನೀಡಲಾಗಿದ್ದು, ಈ ಬೆನ್ನಲ್ಲೇ ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗಳು ಶುರುವಾಗಿವೆ. ಅನೇಕರು ತಮನ್ನಾ ಬದಲು ಕನ್ನಡದವರನ್ನೇ ಆಯ್ಕೆ ಮಾಡಿಕೊಳ್ಳಬಹುದಿತ್ತು ಎಂದು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ತಮನ್ನಾ ಭಾಟಿಯಾ ಅವರು ಬಹುಭಾಷಾ ನಟಿಯಾಗಿ ಖ್ಯಾತಿಗಳಿಸಿದ್ದು, ಮಿಲ್ಕಿ ಬ್ಯೂಟಿ ಎಂದೇ ಫೇಮಸ್‌ ಆಗಿದ್ದಾರೆ. ಅದ್ದರಿಂದಲೇ ಇವರನ್ನು ನೇಮಕ ಮಾಡಿಕೊಂಡರೆ ಬ್ರ್ಯಾಂಡ್‌ ಉತ್ಪನ್ನಗಳ ಜನಪ್ರಿಯತೆ ಮತ್ತಷ್ಟು ಹೆಚ್ಚಬಹುದು ಎಂಬುದು ಸರ್ಕಾರದ ಆಲೋಚನೆಯಾಗಿದೆ. ಅನೇಕ ಬ್ಯೂಟಿ ಬ್ರ್ಯಾಂಡ್‌ ಗಳು ತಮನ್ನಾ ಅವರ ಜೊತೆಗೆ ಒಪ್ಪಂದವನ್ನು ಮಾಡಿಕೊಂಡಿದ್ದು, ಮೈಸೂರು ಸ್ಯಾಂಡಲ್‌ ಸೋಪ್‌ ಕೂಡ ನಟಿಯ ಜೊತೆ ಎರಡು ವರ್ಷಗಳ ಕಾಲ ಒಪ್ಪಂದವನ್ನು ಮಾಡಿಕೊಂಡಿದೆ. ಇದಕ್ಕಾಗಿ ಬರೋಬ್ಬರಿ 6.20 ಕೋಟಿ ರೂಪಾಯಿ ನೀಡಲಾಗಿದೆ ಎಂಬ ಸುತ್ತೋಲೆಗಳು ವೈರಲ್‌ ಆಗಿದೆ.

ಇನ್ನು ಸೋಶಿಯಲ್‌ ಮೀಡಿಯಾದಲ್ಲಿ ಕನ್ನಡದಲ್ಲಿ ಸಾಕಷ್ಟು ನಟಿಯರು ಇದ್ದಾರೆ. ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಳ್ಳಬೇಕಾಗಿತ್ತು ಎಂದು ಸೋಶಿಯಲ್‌ ಮೀಡಿಯಾದಲ್ಲಿ ವ್ಯಕ್ತವಾಗಿದೆ.

Author:

...
Sushmitha N

Copy Editor

prajashakthi tv

share
No Reviews