ಕೊಪ್ಪಳ :
ಇತ್ತೀಚಿನ ದಿನಗಳಲ್ಲಿ,ಯಾವಾಗ ಎಲ್ಲಿ ಅಪಘಾತಗಳು ಸಂಭವಿಸುತ್ತವೆ ಎಂದು ಊಹಿಸಲು ಸಾಧ್ಯವಿಲ್ಲ. ಕರ್ನಾಟಕದ ಹಲವೆಡೆ ಅಪಘಾತಗಳು ಅಂಭವಿಸುತ್ತಿವೆ. ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾದ ಪರಿಣಾಮ 31 ನರೇಗಾ ಕಾರ್ಮಿಕರಿದ್ದು, 28 ಕಾರ್ಮಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಗಂಭೀರ ಗಾಯವಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಬರಗೂರು ಕಮಾನ್ ಬಳಿ ನಡೆದಿದೆ. ನರೇಗಾ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಕೆಲವರಿಗೆ ಗಂಭೀರ ಗಾಯಗಳಾಗಿವೆ.
ಕಾರಟಗಿ ತಾಲ್ಲೂಕಿನ ಬರಗೂರು ಕಮಾನ್ ಬಳಿ ನರೇಗಾ ಕೆಲಸ ಮಾಡುತ್ತಿದ್ದ 31 ಕಾರ್ಮಿಕರನ್ನು ಬೆಳಗ್ಗೆ ನರೇಗಾ ಕೆಲಸಕ್ಕೆ ಕರಿದುಕೊಂಡು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.ಇನ್ನುಗಾಯಳುಗಳನ್ನು ಹುಬ್ಬಳ್ಳಿ ಮತ್ತು ಕೊಪ್ಪಳದ ಕಿಮ್ಸ್, ಆಸ್ಪತ್ರೆಗೆಯಲ್ಲಿ ಮೂವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು,ಇನ್ನಳಿದ ಗಾಯಾಳುಗಳನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ವಿಷಯವನ್ನು ತಿಳಿದ ಸಚಿವರು ಆಸ್ಪತ್ರೆಗೆ ಭೇಟಿಯನ್ನು ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಈ ಘಟನೆಯು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.