ಆಸ್ಟ್ರೇಲಿಯಾ ವಿರುದ್ಧ ನಡೆದ ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಮೂಲಕ ಭಾರತ ಕ್ರಿಕೆಟ್ ತಂಡ ಫೈನಲ್ಗೆ ಎಂಟ್ರಿ ನೀಡಿದೆ. ದುಬೈ ಅಂತರರಾಷ್ಟ್ರೀಯಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿದಟೀಂ ಇಂಡಿಯಾ ಅಜೇಯ ತಂಡವಾಗಿ ಫೈನಲ್ಗೆ ಟಿಕೆಟ್ ಪಡೆದುಕೊಂಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 264 ರನ್ ಕಲೆಹಾಕಿತು. ಈ ಗುರಿಯನ್ನು ಭಾರತ ಸುಲಭವಾಗಿ ಬೆನ್ನಟ್ಟಿತು. ಮತ್ತೊಂದು ಸೆಮಿಫೈನಲ್ ಇಂದು ನಡೆಯಲಿದ್ದು, ನ್ಯೂಜಿಲೆಂಡ್ ಮತ್ತು ಆಫ್ರಿಕಾ ತಂಡ ಮುಖಾಮುಖಿಯಾಗುತ್ತಿವೆ. ಭಾರತ ತಂಡ ಮತ್ತು ಇಂದಿನ ಪಂದ್ಯದ ವಿಜೇತರು ಮಾರ್ಚ್ 9 ರಂದು ನಡೆಯುವ ಅಂತಿಮ ಪಂದ್ಯದಲ್ಲಿ ಸ್ಪರ್ಧಿಸುತ್ತಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಫೈನಲ್ ಗೇರಿರುವ ಭಾರತ ತಂಡಕ್ಕೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಭಾರತ ತಂಡದ ಸಾಧನೆಗೆ ದೇಶದ ಗಣ್ಯರು ಶುಭ ಕೋರಿದ್ದು, ಫೈನಲ್ ಪಂದ್ಯ ಕೂಡ ಗೆಲ್ಲುವಂತೆ ಶುಭ ಹಾರೈಸಿದ್ದಾರೆ.
ಆಸ್ಟ್ರೇಲಿಯಾ ತಂಡವನ್ನು ಮಣಿಸುವ ಮೂಲಕ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಸತತ ಮೂರನೇ ಬಾರಿಗೆ ಹಾಗೂ ಒಟ್ಟಾರೆ 5ನೇ ಬಾರಿಗೆ ಫೈನಲ್ ಪ್ರವೇಶಿಸಿತು.ಭಾರತ 2000ದಲ್ಲಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿ ಸೋಲು ಕಂಡಿತ್ತು. ನಂತರ 2002ರಲ್ಲಿ ಶ್ರೀಲಂಕಾ ಜೊತೆಗೂಡಿ ಜಂಟಿ ಚಾಂಪಿಯನ್ ಆಗಿತ್ತು. ಮತ್ತೆ 2013ರಲ್ಲಿಫೈನಲ್ ಪ್ರವೇಶಿಸಿದ್ದ ಟೀಮ್ ಇಂಡಿಯಾ ಇಂಗ್ಲೆಂಡ್ ಮಣಿಸಿ ಚಾಂಪಿಯನ್ ಆಗಿತ್ತು.ಮತ್ತೆ 2017ರಲ್ಲಿ ಆವೃತ್ತಿಯಲ್ಲಿ ಭಾರತ ತಂಡ 4ನೇ ಬಾರಿ ಫೈನಲ್ ಪ್ರವೇಶಿಸಿದರೂ ಪಾಕಿಸ್ತಾನದ ವಿರುದ್ಧ ಸೋಲು ಕಂಡು ರನ್ನರ್ ಅಪ್ ಆಗಿತ್ತು. ಇದೀಗ ದಾಖಲೆಯ 5ನೇ ಬಾರಿಗೆ ಫೈನಲ್ಗೆ ಎಂಟ್ರಿಕೊಟ್ಟಿದೆ.