CRICKET : ಭಾರತಕ್ಕೆ ಮರಳಿದ ಟೀಮ್ ಇಂಡಿಯಾ ಆಟಗಾರ

CRICKET NEWS : ಇಂಗ್ಲೆಂಡ್ ವಿರುದ್ಧದ ಬಹು ನಿರೀಕ್ಷಿತ ಟೆಸ್ಟ್ ಸರಣಿಗೆ ಕೇವಲ ಕೆಲವೇ ದಿನಗಳು ಬಾಕಿಯಿರುವಂತೆಯೇ, ಭಾರತ ಎ ತಂಡದ ಆಟಗಾರರು ತವರಿಗೆ ಮರಳಿದ್ದಾರೆ. ಅಭ್ಯಾಸ ಪಂದ್ಯದಲ್ಲಿ ಶತಕ ಸಿಡಿಸಿ ಗಮನ ಸೆಳೆದಿದ್ದ ಸರ್ಫರಾಝ್ ಖಾನ್ ಕೂಡ ಭಾರತದತ್ತ ಪ್ರಯಾಣಿ ಸಿದ್ದಾರೆ.

ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಟೀಮ್ ಇಂಡಿಯಾ ಜರ್ಸಿ ತೊಟ್ಟಿದ್ದ ಸರ್ಫರಾಝ್, ಈ ಬಾರಿ ಇಂಗ್ಲೆಂಡ್ ಸರಣಿಗೆ ಆಯ್ಕೆಯಾಗಿಲ್ಲ. ಆದರೆ, ಭಾರತ ಎ ತಂಡದ ಭಾಗವಾಗಿ ಇಂಗ್ಲೆಂಡ್ ಲಯನ್ಸ್ ವಿರುದ್ಧ ಹಾಗೂ ಟೀಮ್ ಇಂಡಿಯಾ ವಿರುದ್ಧದ ಅಭ್ಯಾಸ ಪಂದ್ಯಗಳಲ್ಲಿ ಭಾಗವಹಿಸಿ ದ್ದರು.

ಇಂಗ್ಲೆಂಡ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ 92 ರನ್ ಬಾರಿಸಿದ್ದ ಸರ್ಫರಾಝ್, ನಂತರ ಟೀಮ್ ಇಂಡಿಯಾ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಕೇವಲ 76 ಎಸೆತಗಳಲ್ಲಿ 15 ಬೌಂಡರಿ ಹಾಗೂ 2 ಸಿಕ್ಸರ್ ಗಳೊಂದಿಗೆ ಶತಕ ಸಿಡಿಸಿದರು. ಟೀಮ್ ಇಂಡಿಯಾದ ಪ್ರಮುಖ ಬೌಲರ್‌ಗಳ ಬೌಲಿಂಗ್‌ಗೆ ತಕ್ಕ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಸ್ಥಿತಿಪಜಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದರು.

ಆದರೆ, ಈ ಮಿಂಚಿದ ಪ್ರದರ್ಶನದ ಹೊರತಾಗಿಯೂ ಸರ್ಫರಾಝ್ ಖಾನ್‌ಗೆ ಇಂಗ್ಲೆಂಡ್ ಸರಣಿಗೆ ಹೆಚ್ಚುವರಿ ಬ್ಯಾಟರ್ ಆಗಿ ಸ್ಥಾನ ನೀಡಲಾಗಿಲ್ಲ. ಈ ಹಿನ್ನೆಲೆಯಲ್ಲಿ ಭಾರತ ಎ ತಂಡದ ಇನ್ನಿತರ ಆಟಗಾರರೊಂದಿಗೆ ಅವರು ಭಾರತಕ್ಕೆ ಹಿಂದಿರುಗಿದ್ದಾರೆ.

Author:

...
Keerthana J

Copy Editor

prajashakthi tv

share
No Reviews