ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಹೆಸರುಘಟ್ಟ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರ ಮದುವೆ ಬೆಳಗ್ಗೆ ಶುಭ ಮುಹೂರ್ತದಲ್ಲಿ ಅದ್ದೂರಿಯಾಗಿ ನೆರವೇರಿದೆ. ಎರಡು ಕುಟುಂಬದ ಸದಸ್ಯರ ಮತ್ತು ಆಪ್ತರ ಸುಮುಖದಲ್ಲಿ ಸಿಂಪಲ್ ಆಗಿ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ವಿವಾಹವಾಗಿದ್ದಾರೆ.
ವಿವಾಹ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ವಿ.ಸೋಮಣ್ಣ, ಆರ್ ಬಿಜೆಪಿ ಶಾಸಕರು, ಸಂಸದರು ಮುಂತಾದವರು ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದ್ದಾರೆ. ಮಾರ್ಚ್ 9 ರಂದು ಆರತಕ್ಷತೆ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಬೆಳಗ್ಗೆ 10:30 ರಿಂದ 1:30 ರವರೆಗೆ ರಿಸೆಪ್ಷನ್ ನಡೆಯಲಿದ್ದು ರಾಜಕಾರಣಿಗಳು, ಸಿನಿಮಾರಂಗದವರು, ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡವರು ರಿಸೆಪ್ಷನ್ಗೆ ಬರುವ ಸಾಧ್ಯತೆ ಇದೆ.