ದಕ್ಷಿಣ ಕನ್ನಡ : ಖಾಸಗಿ ಬಸ್-ಕಾರ್ ನಡುವೆ ಭೀಕರ ಅಪಘಾತ | ತಂದೆ ಮಗಳಿಗೆ ಗಂಭೀರ ಗಾಯ

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುರ ಎಂಬಲ್ಲಿ ಇಂದು  ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್‌ ಮತ್ತು ಕಾರಿನ ನಡುವೆ ನಡೆದ ಈ ಅಪಘಾತದಲ್ಲಿ ತಂದೆ ಮತ್ತು ಮಗಳಿಗೆ ಗಂಭೀರ ಗಾಯಗಳಾಗಿವೆ. ಆದರೆ ಕಾರಿನಲ್ಲಿ ಇದ್ದ ಮಗು ಪವಾಡ ಸದೃಶ್ಯವಾಗಿ ಪ್ರಾಣಾಪಾಯದಿಂದ ಪಾರಾಗಿದೆ.

ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು, ಪುತ್ತೂರಿನಿಂದ ಕೆದಿಲ ಕಡೆಗೆ ಸಾಗುತ್ತಿದ್ದ ಕಾರಿಗೆ ಮುರ ಎಂಬಲ್ಲಿ ಡಿಕ್ಕಿಯಾಗಿದೆ. ಕಾರು ಬಲಕ್ಕೆ ತಿರುಗುತ್ತಿದ್ದ ವೇಳೆ ಬಸ್ ಹಿಂಬದಿಗೆ ಗುದ್ದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದೆ.

ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿ ಒಟ್ಟು ಮೂವರು ಪ್ರಯಾಣಿಕರಿದ್ದರು. ತಂದೆ ಹಾಗೂ ಮಗಳಿಗೆ ಗಂಭೀರ ಗಾಯಗಳಾಗಿದ್ದು, ಪವಾಡ ಸದೃಶ್ಯವಾಗಿ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಗಾಯಾಳುಗಳನ್ನು ಮಂಗಳೂರಿನ (Mangaluru) ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Author:

...
Keerthana J

Copy Editor

prajashakthi tv

share
No Reviews