BELAGAVI : ಬೆಳಗಾವಿಯಲ್ಲಿ ಭೀಕರ ಅಪಘಾತ | ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

BELAGAVI NEWS : ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವೃದ್ಧೆ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಇನ್ನು ಈ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆನಚಿನಮರಡಿ [BENACINAMARADI] ಗ್ರಾಮದ ಹೊರವಲಯದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬೈಲಹೊಂಗಲದಿಂದ ಗೋಕಾಕದತ್ತ ಹೋಗುತ್ತಿದ್ದ ಖಾಸಗಿ ಬಸ್ಸಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದೆ. ಇನ್ನು ಈ ಅಪಘಾತದಲ್ಲಿ 70 ವರ್ಷದ ಯಲ್ಲವ್ವ ಬೀರನಗಡ್ಡಿ ಎಂಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಬಸ್ ಕೆಳಗೆ ಸಿಲುಕಿದ ಅವರ ಜೀವ ಉಳಿಯಲಿಲ್ಲ.

ಘಟನೆಯ ನಂತರ ಸ್ಥಳೀಯರು ಸಹಾಯಕ್ಕೆ ಧಾವಿಸಿ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಹೊರತೆಗೆದಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನಾ ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Author:

...
Keerthana J

Copy Editor

prajashakthi tv

share
No Reviews