ದೇಶ:
ಪ್ರವಾಸವನ್ನು ಮೊಟಕುಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ್ರಯು. ಬಳಿಕ ಅಜೀತ್ ದೋವಲ್, ಎಸ್. ಜೈಶಂಕರ್ ಅವರೊಂದಿಗೆ ತುರ್ತು ಸಭೆ ನಡೆಸಿದರು.
ಉಗ್ರರ ದಾಳಿ ಮತ್ತು ಅದರ ವಿರುದ್ಧದ ಮುಂದಿನ ನಡೆಯ ಕುರಿತು ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಚರ್ಚಿಸಿದ್ರು. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕೂಡ ಸಭೆಯಲ್ಲಿ ಭಾಗವಹಿಸಿದರು.
ಕಣಿವೆಯಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಅತ್ಯಂತ ಭೀಕರ ದಾಳಿ ಮತ್ತು ಅದರ ವಿರುದ್ಧ ದೇಶಾದ್ಯಂತ ವ್ಯಕ್ತವಾಗುತ್ತಿರುವ ಆಘಾತ ಮತ್ತು ಆಕ್ರೋಶದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.