ಹಾಸನ:
ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್ ಗೆ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದು ಕಾರು ಚಾಲಕ, ಕಾರು ನಿಲ್ಲಿಸದೇ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಉದಯಗಿರಿಯಲ್ಲಿ ನಡೆದಿದೆ.
ಬೈಕ್ ಸವಾರ 58 ವರ್ಷದ ಶಂಕರ್ ಎಂಬುವವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಚಾಲಕ ವೇಗವಾಗಿ ಬಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ, ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಶಂಕರ್ ಎಂಬುವವರು ಕಾರು ಗುದ್ದಿದ ರಭಸಕ್ಕೆ ಹಾರಿ ಕೆಳಗಡೆ ಬಿದ್ದಿದ್ದಾರೆ. ಆದರೆ ಕಾರು ಚಾಲಕ ಕಾರನ್ನು ನಿಲ್ಲಿಸದೇ ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾರೆ ಇನ್ನು ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಕುರಿತು ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.