ಗುಬ್ಬಿ : ಕಿಡಿಗೇಡಿಗಳ ಕೃತ್ಯಕ್ಕೆ ಅರಣ್ಯ ಪ್ರದೇಶ ಧಗಧಗ

ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುತ್ತಿರುವುದು.
ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುತ್ತಿರುವುದು.
ತುಮಕೂರು

ಗುಬ್ಬಿ:

ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಸುರಗೇನಹಳ್ಳಿ ಗ್ರಾಮದ ಸುಮಾರು 80 ಎಕರೆ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು, ಬೆಂಕಿಯ ಕೆನ್ನಾಲಗೆಗೆ ಅರಣ್ಯ ಪ್ರದೇಶದಲ್ಲಿದ್ದ ಸುಮಾರು ಮರಗ ಗಿಡಗಳು ಸುಟ್ಟು ಕರಕಲಾಗಿವೆಕೂಡಲೇ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

ಹಿಂದೆ ಕಳೆದ 15 ದಿನಗಳ ಹಿಂದೆಯಷ್ಟೇ ಇದೇ ಅರಣ್ಯ ಪ್ರದೇಶದಲ್ಲಿರುವ ಗುಡ್ಡದ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಕಳ್ಳರ ಕೈ ಚಳಕಕ್ಕೆ ದೇವಾಲಯದ ಕಿಟಕಿ ಹೊಡೆದು ಕಳ್ಳತನಕ್ಕೆ ಮುಂದಾದ ಘಟನೆ ಮಾಸುವ ಮುನ್ನವೇ ಕಾಡಿನಲ್ಲಿ ಬೆಂಕಿ ಅವಘಡ ಜರುಗಿದೆ. ಸುಮಾರು 100 ಎಕರೆ ಅರಣ್ಯ ಪ್ರದೇಶ ಹೊಂದಿರುವ ಸುರಿಗೇನಹಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಗುಡ್ಡದ ರಂಗನಾಥಸ್ವಾಮಿ ದೇವಾಲಯ ಬೆಟ್ಟದ ತಪ್ಪಲಿನಲ್ಲಿರುವುದು ಒಂದೆಡೆಯಾದರೆ, ಸುಂದರವಾದ ಹಸಿರು ವನಸಿರಿಯ ಜೊತೆಗೆ ದೇವಾಲಯ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದಾಗಿದೆ. ಆದರೆ  ಕಾಡಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು ಪರಿಸರ ಪ್ರೇಮಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಬೇಸಿಗೆ ಶುರುವಾದ ನಂತರದ ದಿನಗಳಲ್ಲಿ ಅರಣ್ಯ ಪ್ರದೇಶಕ್ಕೆ ಮೂರು ಬಾರಿ ಬೆಂಕಿ ದುರಂತ ಸಂಭವಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

Author:

...
Editor

ManyaSoft Admin

Ads in Post
share
No Reviews