VIJAYANAGARA: ಜಮೀನಿನಲ್ಲಿ ಕೆಲಸ ಮಾಡ್ತಿದ್ದ ಕೂಲಿ ಕಾರ್ಮಿಕರನ್ನ ವಿಮಾನದಲ್ಲಿ ಪ್ರಯಾಣ ಮಾಡಿಸಿದ ಮಾಲೀಕ

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕೂಲಿ ಕಾರ್ಮಿಕರಿಗೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಶಿರಗನಹಳ್ಳಿ ರೈತರೊಬ್ಬರು ವಿಮಾನಯಾನ ಮಾಡಿಸಿದ್ದಾರೆ. ಕೃಷಿ ಕಾರ್ಮಿಕರ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಈ ರೈತನ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.

 ನಮ್ಮ ಕರ್ನಾಟಕ ರಾಜ್ಯ ಮಾತ್ರವಲ್ಲ, ಇಡೀ ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲಿ ಕೃಷಿ ಜಮೀನಿನಲ್ಲಿ ಕೂಲಿ ಕೆಲಸ ಮಾಡುವುದಕ್ಕೆ ಕಾರ್ಮಿಕರು ಸಿಗುತ್ತಿಲ್ಲ ಎಂಬ ಅಳಲು ಕೇಳಿಬರುತ್ತಿದೆ. ಹೀಗಾಗಿ, ಬಹುತೇಕ ಜಮೀನುದಾರರು, ರೈತರು ಕೃಷಿ ಯಂತ್ರೋಪಕರಣ ಮೊರೆ ಹೋಗಿದ್ದಾರೆ. ಆದರೂ, ಕೆಲವು ಕೆಲಸಗಳನ್ನು ಕಾರ್ಮಿಕರೇ ಮಾಡಬೇಕಾದ್ದರಿಂದ ಇದಕ್ಕೆ ಪರ್ಯಾಯ ಇಲ್ಲದಂತಾಗಿದೆ. ಆದ್ದರಿಂದ ಜಮೀನು ಹೊಂದಿರುವ ರೈತರು ಕೃಷಿ ಕಾರ್ಮಿಕರ ಮನೆಗೆ ಹೋಗಿ ಅವರ ಮನವೊಲಿಸಿ ಜಮೀನಿಗೆ ಕರೆದೊಯ್ದು ಕೆಲಸ ಮಾಡಿಸುತ್ತಾರೆ.

ಆದರೆ, ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಶಿರಗನಹಳ್ಳಿ ರೈತ ತಮ್ಮ ಜಮೀನಿಗೆ ಖಾಯಂ ಆಗಿ ಕೂಲಿ ಕೆಲಸಕ್ಕೆ ಬರುತ್ತಿದ್ದ ಮಹಿಳಾ ಕಾರ್ಮಿಕರಿಗೆ ಏನಾದರೂ ಒಂದು ಜೀವನಪೂರ್ತಿ ಮರೆಯಲಾಗದ ಉಡುಗೊರೆ ಕೊಡಬೇಕು ಎಂದುಕೊಂಡಿದ್ದಾನೆ. ಇನ್ನು ತೋಟದಲ್ಲಿ ಕೆಲಸ ಮಾಡುವಾಗ ಯಾವುದಾದರೂ ವಿಮಾನ ಬುರ್ರೆಂದು ಶಬ್ದ ಮಾಡಿಕೊಂಡು ಮೇಲೆ ಹೋಗುತ್ತಿದ್ದರೆ, ಎಲ್ಲರೂ ಕೆಲಸ ಬಿಟ್ಟು ಕೆಲ ಕ್ಷಣ ಆಕಾಶದತ್ತ ಕಣ್ಣು ಹಾಯಿಸಿ ವಿಮಾನ ಹೋಗುವುದನ್ನು ನೋಡಿ ಖುಷಿ ಪಡುತ್ತಿದ್ದರು. ಆಗ ರೈತನಿಗೆ ಹೊಳೆದಿದ್ದೇ ಎಲ್ಲ ಕಾರ್ಮಿಕರಿಗೆ ವಿಮಾನದಲ್ಲಿ ಪ್ರಯಾಣ ಮಾಡಿಸಬೇಕು ಎಂದು ತೀರ್ಮಾನ ತೆಗೆದುಕೊಂಡಿದ್ದಾನೆ.

ವಿಶ್ವನಾಥ್ ತೋಟಕ್ಕೆ ಕೂಲಿ ಕೆಲಸಕ್ಕೆ ಬರುತ್ತಿದ್ದ ಮಹಿಳೆಯರು, ಒಮ್ಮೆಯಾದರೂ ವಿಮಾನದಲ್ಲಿ ಪ್ರಯಾಣ ಬೆಳೆಸಬೇಕೆಂಬ ಆಸೆ ವ್ಯಕ್ತಪಡಿಸಿದ್ದರು. ವಿಶ್ವನಾಥ್ ಮಹಿಳಾ ಕೂಲಿ ಕಾರ್ಮಿಕರಿಗೆ ವಿಮಾನ ಪ್ರಯಾಣ ಮಾಡಿಸಿ ಅವರ ಆಸೆ ಪೂರೈಸಿದ್ದಾರೆ.

Author:

...
Editor

ManyaSoft Admin

Ads in Post
share
No Reviews