ಗುಬ್ಬಿ:
ಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಆಡಗೊಂಡನಹಳ್ಳಿಯಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಗ್ರಾಮ ಶಾಖೆಯನ್ನ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಉದ್ಘಾಟಿಸಿದ್ರು, ಈ ವೇಳೆ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ, ಸಿ ಜಿ ಲೋಕೇಶ್, ಹೋಬಳಿ ಘಟಕದ ಅಧ್ಯಕ್ಷ ಯತೀಶ್, ಗರುಚನ್ನಬಸಪ್ಪ, ಬಾಂಬೆ ಬಸವರಾಜು,ಪುಟ್ಟರಾಜು, ಗಂಗರಾಜು, ಸೇರಿ ಗ್ರಾಮಸ್ಥರು ಹಾಜರಿದ್ದರು.
ಈ ವೇಳೆ ಜಿಲ್ಲಾಧ್ಯಕ್ಷ ಗೋವಿಂದರಾಜು ಮಾತನಾಡಿ, ರಾಜ್ಯ ಸರ್ಕಾರ ಇಂದಿನ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಕೇವಲ ಶೇ.14ರಷ್ಟು ಅನುದಾನ ಘೋಷಿಸಿ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದೆ ಎಂದು ಅಸಮಧಾನ ಹೊರಹಾಕಿದ್ರು. ಸರ್ಕಾರಗಳು ಕೃಷಿ ಕ್ಷೇತ್ರವನ್ನು ಆದ್ಯತಾ ವಲಯವಾಗಿ ಪರಿಗಣಿಸದೆ ರೈತರನ್ನು ನಿರ್ಲಕ್ಷಿಸುತ್ತಿದೆ. ಈ ದೇಶದಲ್ಲಿ ಶೇಕಡ 70ರಷ್ಟು ಜನರು ಕೃಷಿ ಕ್ಷೇತ್ರವನ್ನೇ ನಂಬಿ ಕೆಲಸ ಮಾಡುತ್ತಿದ್ದಾರೆ.ಹಾಗಾಗಿ ಸರ್ಕಾರ ಕೃಷಿ ಕ್ಷೇತ್ರವನ್ನು ಆದ್ಯತ ವಲಯವಾಗಿ ಪರಿಗಣಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸಿದಾಗ ಮಾತ್ರ ಕೃಷಿ ಕ್ಷೇತ್ರದ ಅಭಿವೃದ್ಧಿಯಾಗುತ್ತದೆ.ಕೇಂದ್ರ ಸರ್ಕಾರ ರೈತರ ಹೋರಾಟದ ಫಲವಾಗಿ ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಂಡಿತ್ತು ಆದರೆ ರಾಜ್ಯ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯದೆ ಉದ್ಧಟತನ ತೋರುತ್ತಿದೆ ಎಂದರು.