HEALTH TIPS : ಕ್ಯಾನ್ಸರ್‌ ಪೀಡಿತರಿಗೆ ಈ ಹಣ್ಣು ರಾಮಬಾಣ

HEALTH TIPS: 

ಸೀತಾಫಲವು ಅನೇಕ ಆರೋಗ್ಯ ಪ್ರಯೋಜನಗಳಿಂದ ಸಮೃದ್ಧವಾಗಿರುವ ಹಣ್ಣು. ದಿನಕ್ಕೆ ಒಂದು ಸೀತಾಫಲ ತಿನ್ನುವುದು ನಮ್ಮ ಆರೋಗ್ಯವನ್ನು ಸುಧಾರಿಸುವ ಸುಲಭ ಮಾರ್ಗವಾಗಿದೆ. ಮಕ್ಕಳಿಂದ ಹಿಡಿದು ವಯಸ್ಸಾದವರು ಸಹ ಸೀತಾಫಲ ಹಣ್ಣನ್ನು ತಿನ್ನಬಹುದು. ಸೀತಾಫಲವು  ಅನೇಕ ಆರೋಗ್ಯ ಪ್ರಯೋಜನಗಳಿಂದ ಸಮೃದ್ಧವಾಗಿರುವ ಹಣ್ಣು. ಜನರು ಇಷ್ಟಪಟ್ಟು ಹಣ್ಣುಗಳಲ್ಲಿ ಸೀತಾಫಲವೂ ಕೂಡ ಒಂದಾಗಿದೆ. 

*ಸೀತಾಫಲವು ಕೊಲೆಸ್ಟ್ರಾಲ್ ಮತ್ತು ಕ್ಯಾನ್ಸರ್ ಸಮಸ್ಯೆಗೆ ಇದು ರಾಮಬಾಣವಾಗಿದ್ದು, ವಿಟಮಿನ್ ಸಿ, ಕಬ್ಬಿಣ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಸಾಕಷ್ಟು ವಿಟಮಿನ್ ಬಿ 6 ಇದೆ. ಒತ್ತಡವನ್ನು ಕಡಿಮೆ ಮಾಡಲು ಮತ್ತು ಮೆದುಳಿನ ಆರೋಗ್ಯವನ್ನು ಕಾಪಾಡಲು ಪ್ರಯೋಜನಕಾರಿಯಾಗಿದೆ.

*ಸಾಮಾನ್ಯವಾಗಿ ಗರ್ಭಿಣಿ ಮಹಿಳೆಯರಿಗೆ ಬೆಳಗಿನ ಸಮಯದಲ್ಲಿ ಎದುರಾಗುವ, ವಾಕರಿಕೆ, ವಾಂತಿ, ಹಾಗೂ ದೇಹದಲ್ಲಿ ಹಾರ್ಮೋನುಗಳ ಬದಲಾವಣೆಗಳಿಂದ ಉಂಟಾಗುವ ಮಾನಸಿಕ ಬದಲಾವಣೆಗಳಿಗೆ ಸೀತಾಫಲ ಹಣ್ಣು ಬಹಳ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅಲ್ಲದೆ ಪೊಟ್ಯಾಸಿಯಮ್ ಸಮೃದ್ಧವಾಗಿರುವ ಈ ಹಣ್ಣು ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

*ನಾರಿನ ಅಂಶದಿಂದ ಸಮೃದ್ಧವಾಗಿರುವ ಸೀತಾಫಲಹಣ್ಣು ಮಲಬದ್ಧತೆಯನ್ನು ನಿವಾರಿಸಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಪ್ರಯೋಜನಕಾರಿಯಾಗಿದೆ.

Author:

...
Keerthana J

Copy Editor

prajashakthi tv

share
No Reviews