ಈ ಬಾರಿ ಕಾಡಲಿದೆ ಬಿಸಿಲಿನ ತಾಪ; ಹವಾಮಾನ ಇಲಾಖೆ ವಾರ್ನಿಂಗ್‌

HIGH TEMPERATURE
HIGH TEMPERATURE
ದೇಶ

ಸಿಲಿಕಾನ್​ ಸಿಟಿಯಲ್ಲಿ ಬೇಸಿಗೆಗೂ ಮುನ್ನವೇ ಬಿಸಿಲಿನ ತಾಪಮಾನ ಹೆಚ್ಚಳವಾಗಿದೆ. ಚಳಿಗಾಲ ಮುಕ್ತಾಯಕ್ಕೂ ಮುನ್ನವೇ ಬೆಂಗಳೂರಿಗರಿಗೆ ಬಿಸಿಲ ಬೇಗೆ ಹೆಚ್ಚಾಗಿದೆ. ಸಾಮಾನ್ಯವಾಗಿ ಮಾರ್ಚ್​ 1ಕ್ಕೆ ಆರಂಭವಾಗಿ ಮೇ.31ರವರೆಗೆ ಸಾಮಾನ್ಯವಾಗಿ ಬೇಸಿಗೆ ಇರುತ್ತಿತ್ತು. ಆದರೆ ಈ ಬಾರಿ 30 ಡಿಗ್ರಿಗೂ ಅಧಿಕ ಉಷ್ಣಾಂಶ ದಾಖಲಾಗಿದೆ. ಮುಂದಿನ ದಿನಗಳಲ್ಲಿ 42 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ನಿರೀಕ್ಷೆ ಇದೆ.

ಅದರಲ್ಲೂ ಮಾರ್ಚ್ ಮತ್ತು ಮೇ ತಿಂಗಳಿನಲ್ಲಿ ಉಷ್ಣಾಂಶ ಮತ್ತಷ್ಟು ಹೆಚ್ಚಾಗಲಿದ್ದು, ಬೆಂಗಳೂರಿನಲ್ಲಿ ನೀರಿನ ಕೊರತೆ ಉಂಟಾಗುವ ಸಾಧ್ಯತೆಗಳಿವೆ. ಈಗಾಗಲೇ ಬೇಸಿಗೆಯ ರಣಬಿಸಿಲಿಗೆ ರಾಜ್ಯದ ಜನ ತತ್ತರಿಸಿ ಹೋಗುತ್ತಿದ್ದಾರೆ. ನಿನ್ನೆ ಕೂಡ ಸಿಲಿಕಾನ್ ಸಿಟಿಯಲ್ಲಿ 31 ಡಿಗ್ರಿ ದಾಖಲಾಗಿರುವ ಉಷ್ಣಾಂಶ ಇತ್ತು. ಹೀಗಾಗಿ ಭಾರೀ ಉಷ್ಣಾಂಶ ಏರಿಕೆ ಆಗುತ್ತಿರೋ ಹೊತ್ತಲ್ಲೇ ಹವಾಮಾನ ಇಲಾಖೆ ಜನರಿಗೆ ಎಚ್ಚರಿಕೆ ನೀಡಿದೆ.

ತೇವಾಂಶ ಕೊರತೆ, ಶುಭ್ರ ಆಕಾಶ, ಒಣಗಾಳಿ ಬೀಸುವುದು ಸೇರಿದಂತೆ ಹಲವು ಕಾರಣಗಳಿಂದ ಉಷ್ಣಾಂಶದಲ್ಲಿ ಏರಿಕೆಯಾಗಿದೆ. ಇನ್ನೂ, ವಾಡಿಕೆಗಿಂತ ಹೆಚ್ಚು ಉಷ್ಣಾಂಶ ದಾಖಲಾದರೆ ಜನರ ಆರೋಗ್ಯದಲ್ಲಿ ಏರುಪೇರು ಉಂಟಾಗುವ ಸಾಧ್ಯತೆ ಇದೆ. ಊತ, ತಲೆನೋವು, ವಾಕರಿಕೆ, ನಿರ್ಜಲೀಕರಣ, ಸುಸ್ತು ವಾಂತಿ ಸೇರಿದಂತೆ ಹಲವು ಸಮಸ್ಯೆ ಕಾಡುವ ಸಾಧ್ಯತೆ ಇದ್ದು, ಹೀಗಾಗಿ ಸಾರ್ವಜನಿಕರೂ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಚಳಿಗಾಲದಲ್ಲಿ ಇಷ್ಟು ಪ್ರಮಾಣದಲ್ಲಿರುವ ಉಷ್ಣಾಂಶ ಬೇಸಿಗೆಯಲ್ಲಿ 40 ಡಿಗ್ರಿ ದಾಟಲಿದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ಕೊಟ್ಟಿದ್ದಾರೆ.

Author:

...
Editor

ManyaSoft Admin

Ads in Post
share
No Reviews