ಬೆಳಗಾವಿ : ಅತೀವೇಗವಾಗಿ ಬಂದ ಟ್ಯಾಂಕರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರ ಗುಂಪಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೂ ಮೂವರು ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯ ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರ ಗುಂಪಿಗೆ ಅತಿವೇಗವಾಗಿ ಬಂದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಮೂವರು ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ವಿಷಯ ತಿಳಿದ ಕೂಡಲೇ ಕಿತ್ತೂರು ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.