ತಿಪಟೂರು:
ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕರಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ. ಶುಕ್ರವಾರ ಬೆಳಗ್ಗೆ ತಿಪಟೂರಿನಿಂದ ಬೆಂಗಳೂರು ಕಡೆಗೆ ವೇಗವಾಗಿ ಬರ್ತಿದ್ದ ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಅವಿನಾಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅವಿನಾಶ್ ಶೆಟ್ಟಿಕೆರೆ ಗ್ರಾಮದವ ಎಂದು ಗುರುತಿಸಲಾಗಿದೆ.
ಅಪಘಾತದ ಸ್ಥಳಕ್ಕೆ ತಿಪಟೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಕುಟುಂಬಸ್ಥರಿಗೆ ಮೃತ ದೇಹವನ್ನು ಹಸ್ತಾಂತರ ಮಾಡಲಾಯಿತು. ಇನ್ನು ಅಪಘಾತದಿಂದ ಬೆಂಗಳೂರು ತಿಪಟೂರು ಹೈವೇಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹಸ ಪಡಬೇಕಾಯಿತು.