ತಿಪಟೂರು : ಭೀಕರ ಅಪಘಾತ | ಸ್ಥಳದಲ್ಲೇ ಇಬ್ಬರ ದುರ್ಮರಣ..!

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ತುಮಕೂರು

ತಿಪಟೂರು:

ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಮತ್ತು ಹಿಂಬಂದಿಯಲ್ಲಿ ಕುಳಿತಿದ್ದವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿಯ ಆಲ್ಬುರು ಸಮೀಪ ನಡೆದಿದೆ.

ಬಿದರೆಕೆರೆ ಕಡೆಯಿಂದ ಬರುತ್ತಿದ್ದ ಬೈಕ್‌ಗೆ ತುರುವೇಕೆರೆ ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಿದರೆಕೆರೆ ಗ್ರಾಮದ ಯೋಗೇಶ್ (23) ಮತ್ತು  ದಯಾನಂದ್ (25) ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಮೃತರಿಬ್ಬರು ಬೈಕ್ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದರು. ವೃತ್ತಿಯಲ್ಲಿ ಮೆಕ್ಯಾನಿಕ್‌ ಆಗಿರುವ ಇಬ್ಬರು ಕೆಲಸ ಮುಗಿಸಿ ಬರುವ ವೇಳೆ ಅಪಘಾತ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ನೊಣವಿನಕೆರೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನೊಣವಿನಕೆರೆ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author:

share
No Reviews