SANDLEWOOD : ಮೇ 19, 2003ರಂದು ದರ್ಶನ್ ಮತ್ತು ವಿಜಯಲಕ್ಷ್ಮೀ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ನಟ ದರ್ಶನ್ ಹಾಗೂ ವಿಜಯಲಕ್ಷ್ಮೀ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 22 ವರ್ಷ ತುಂಬಿದೆ. ಇನ್ನು ಈ ವಿಶೇಷ ಕ್ಷಣವನ್ನು ಅವರು ಕುಟುಂಬಸ್ಥರು ಮತ್ತು ಸ್ನೇಹಿತರೊಂದಿಗೆ ರೆಸಾರ್ಟ್ನಲ್ಲಿ ಆಚರಿಸಿಕೊಂಡಿದ್ದು, ಅದರ ಕೆಲ ಫೋಟೋಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಇನ್ನು ವಿವಾಹ ದಿನದ ನೆನಪಿಗಾಗಿ ವಿಜಯಲಕ್ಷ್ಮೀ ಅವರು ತಮ್ಮ ಪತಿಯ ಜೊತೆಗಿನ ಫೋಟೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದರ ಜೊತೆಗೆ "ಶಾಶ್ವತ" ಅಂತ ಬರೆದುಕೊಂಡಿದ್ದಾರೆ. ಸದಯ ಈ ಪೋಟೋ ವೈರಲ್ ಆಗುತ್ತಿದೆ.ನಟ ದರ್ಶನ್ ಸದ್ಯ ‘ಡೆವಿಲ್’ ಚಿತ್ರದಲ್ಲಿ ಬ್ಯೂಸಿಯಾಗಿದ್ದಾರೆ. ಆದರೆ ಎಲ್ಲ ಬ್ಯುಸಿಯ ನಡುವೆಯೂ ಕುಟುಂಬಕ್ಕೆ ಆದ್ಯತೆ ನೀಡಿರುವುದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
ಇನ್ನು ದರ್ಶನ್ ಅವರ ವಿವಾಹ ಆಮಂತ್ರಣ ಪತ್ರ ವೈರಲ್ ಆಗಿದೆ. 19-05-2003ರ ಸೋಮವಾರ ಬೆಳಿಗ್ಗೆ 9:10ರಿಂದ 9:50ರವರೆಗಿನ ಮಿಥುನ ಲಗ್ನದಲ್ಲಿ ನಾವು ವಿವಾಹವಾಗುತ್ತಿದ್ದೇವೆ. ಧರ್ಮಸ್ಥಳದ ವಸಂತ್ ಮಹಲ್ನಲ್ಲಿ ಮದುವೆ ನಡೆಯಲಿದೆ. ಎಲ್ಲರೂ ಮದುವೆಗೆ ಆಗಮಿಸಬೇಕು ಎಂದು ಆಮಂತ್ರಣ ಕೋರುತ್ತಿದ್ದೇನೆ’ ಎಂಬುದಾಗಿ ಆಮಂತ್ರಣ ಪತ್ರದಲ್ಲಿ ಬರೆಯಲಾಗಿತ್ತು.