ತುಮಕೂರು : ತುಮಕೂರಿನ ಸಿದ್ದಗಂಗಾ ಮಠದಲ್ಲಿ ರಾರಾಜಿಸಿದ ತ್ರಿವರ್ಣ ಧ್ವಜ

ಸಿದ್ದಗಂಗಾ ಮಠದಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ
ಸಿದ್ದಗಂಗಾ ಮಠದಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ
ತುಮಕೂರು

ತುಮಕೂರು:

ತುಮಕೂರಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು, ಎಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸಿದೆ. ಸಿದ್ದಗಂಗಾ ಮಠದಲ್ಲೂ ಅತ್ಯಂತ ಸಂಭ್ರಮ ಸಡಗರದಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು, ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಧ್ವಜಾರೋಹಣವನ್ನು ನೆರವೇರಿಸಿದರು.

ಧ್ವಜಾರೋಹಣದ ವೇಳೆ ಮಠದ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡುವ ಮೂಲಕ ರಾಷ್ಟ್ರಪ್ರೇಮ ಮೆರೆದರು. ಬಳಿಕ ಜಿಲ್ಲಾ ಪೊಲೀಸ್‌ ಸಿಬ್ಬಂದಿ, ಎನ್‌ಸಿಸಿ, ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಹಾಗೂ ವಿವಿಧ ಶಾಲಾ- ಕಾಲೇಜು ವಿದ್ಯಾರ್ಥಿಗಳು ಪಥಸಂಚಲನದ ಮೂಲಕ ರಾಷ್ಟ್ರ ಪ್ರೇಮವನ್ನು ಮೆರೆದರು. ಈ ವೇಳೆ ಮಠದ ಮಕ್ಕಳಿಗೆ ಪರಮೇಶ್ವರ್‌ ಅವರು ಸಂವಿಧಾನ ಪೀಠಿಕೆಯನ್ನು ಭೋದಿಸಿದರು.

ಗಣರಾಜ್ಯೋತ್ಸವದ ಅಂಗವಾಗಿ ಶಿವಕುಮಾರ ಮಹಾಸ್ವಾಮಿಗಳ ಗದ್ದುಗೆಗೆ ಕೇಸರಿ, ಬಿಳಿ, ಹಸಿರು ಬಣ್ಣಗಳ ಹೂಗಳಿಂದ ಗದ್ದುಗೆಗೆ ವಿಶೇಷ ಅಲಂಕಾರ ಮಾಡಲಾಗಿತ್ತು.  ಸಿದ್ದಗಂಗಾ ಮಠದಲ್ಲಿ ಮಕ್ಕಳ ಕಲರವ ಕಣ್ಮನೆ ಸೆಳೆಯುವಂತಿತ್ತು. ಇನ್ನು ಕಾರ್ಯಕ್ರಮದಲ್ಲಿ ಶಾಸಕರಾದ ಜ್ಯೋತಿ ಗಣೇಶ್‌, ಸುರೇಶ್‌ ಗೌಡ, ಜಿಲ್ಲಾಧಿಕಾರಿ ಶುಭಕಲ್ಯಾಣ್‌, ಜಿಲ್ಲಾ ಪಂಜಾಯತ್‌ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಶೋಕ್‌ ಸೇರಿ ಹಲವಾರು ಮಂದಿ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್‌, ಬಾಬಾ ಸಾಹೇಬ್ ಅಂಬೇಡ್ಕರ್ ರಚನೆ ಮಾಡಿದಂತಹ ಈ ಸಂವಿಧಾನ ಇಡೀ ವಿಶ್ವದಲ್ಲೇ ಒಂದು ಬಲಿಷ್ಠ ವಾದಂತಹ ಸಂವಿಧಾನ ಅದು ಭಾರತದ ಸಂವಿಧಾನವಾಗಿದೆ. ಇಡೀ ವಿಶ್ವದಲ್ಲೇ ಆರ್ಥಿಕತೆಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ ಅಂದ್ರೆ ನಂಬಲಿಕೆ ಸಾಧ್ಯ ಇಲ್ಲ, ಒಂದು ಕಾಲದಲ್ಲಿ ಬಡತನದ ಬೇಗೆಯಲ್ಲಿ ಬಳಲುತ್ತಿದ್ದ ಭಾರತ ಇಂದು ಬಲಿಷ್ಠ ಭಾರತವಾಗಿದೆ ಎಂದರು.

ಸಿದ್ದಗಂಗಾ ಮಠದ ಶ್ರೀಗಳಾದ ಸಿದ್ದಗಂಗಾ ಶ್ರೀಗಳು ಮಾತನಾಡಿ, ಭಾರತ ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶವಾಗಿದೆ. ಹೋರಾಟಗಾರರು, ಯೋಧರ ತ್ಯಾಗ ಬಲಿದಾನದಿಂದಾಗಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಭಾರತದ ಸಂವಿಧಾನ ಬೃಹತ್‌ ಸಂವಿಧಾನವಾಗಿದ್ದು, ನಾವೆಲ್ಲರೂ ಒಂದೇ. ಹೀಗೆ ಒಂದಾಗಿ ಬದುಕೋಣ ಎಂದು ಸಂದೇಶ ರವಾನಿಸಿದರು.

Author:

...
Editor

ManyaSoft Admin

Ads in Post
share
No Reviews