TUMAKURU: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಮಠಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸ್ವಾಮೀಜಿಗಳ ತಂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಲು ಮುಂದಾಗಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ವಾಮೀಜಿಗಳು ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಾರೆ.
ತುಮಕೂರಿನಲ್ಲಿ ಈ ಕುರಿತು ಡಾ. ಪ್ರಣವಾನಂದ ಸ್ವಾಮೀಜಿ, ನಾರಾಯಣಗುರು ಶಕ್ತಿ ಪೀಠ, ಕಲಬುರ್ಗಿ, ಬಸವನಾಗಿದೇವ ಶರಣ ಛಲವಾದಿ ಜಗದ್ಗುರು ಪೀಠ, ಚಿತ್ರದುರ್ಗ, ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ ಕುಂಬಾರ ಮಹಾಸಂಸ್ಥಾನ ಪೀಠ, ಚಿತ್ರದುರ್ಗ ಸುದ್ದಿಗೋಷ್ಠಿ ನಡೆಸಿದ್ದಾರೆ.
ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಅವರೇ ಕಾರಣ ತಕ್ಷಣ ಇವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಭದ್ರತಾ ವ್ಯವಸ್ಥೆ ಕಲ್ಪಿಸುವಲ್ಲಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎನ್ನುತ್ತಿದ್ದಾರೆ. ಅಲ್ಲದೆ, RCB ತಂಡದ ಹಣಕಾಸು ವ್ಯವಹಾರಗಳ ಬಗ್ಗೆಯೂ ಶಂಕೆ ವ್ಯಕ್ತಪಡಿಸಿದ್ದಾರೆ.
"RCB ತಂಡದಲ್ಲಿ ಅಂತರಾಷ್ಟ್ರೀಯ ಮಟ್ಟದ ಹಣಕಾಸು ಹೂಡಿಕೆಗಳಿವೆ. ಕೆಲವರು ಈ ತಂಡವನ್ನು ದುರುಪಯೋಗ ಪಡಿಸಿಕೊಂಡಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ED (ಅವನಮಿ ನಿಯಂತ್ರಣ ನಿರ್ದೇಶನಾಲಯ) ತನಿಖೆ ನಡೆಸಬೇಕು," ಎಂದು ಆಗ್ರಹಿಸಿದ್ದಾರೆ.
ಸ್ವಾಮೀಜಿಗಳು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, "ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸುವ ಚಿಂತನೆಗೂ ನಾವು ಮುಂದಾಗಿದ್ದೇವೆ," ಎಂದು ತಿಳಿಸಿದ್ದಾರೆ.