ತುಮಕೂರು:
ತುಮಕೂರು ತಾಲೂಕಿನ ಲಕ್ಕನಹಳ್ಳಿ ಬಳಿಯ ಹೊನ್ನುಡಿಕೆ ರಸ್ತೆಯಲ್ಲಿ ತಡರಾತ್ರಿ ಸೈಕಲ್ ಗೆ ಬೈಕ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ.
ಹೊನ್ನುಡಿಕೆಯಿಂದ ನಾಗವಲ್ಲಿ ಕಡೆಗೆ ಬೈಕ್ ಸವಾರ ಹೋಗುವಾಗ ನಾಗವಲ್ಲಿ ಕಡೆಯಿಂದ ಬರುತ್ತಿದ್ದ ಸೈಕಲ್ ಗೆ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಬೇಗೂರು ಗ್ರಾಮದ ನಿವಾಸಿ ನರಸಿಂಹಮೂರ್ತಿ (47) ರಸ್ತೆಗೆ ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರು ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಕೂಲಿ ಕೆಲಸ ಮಾಡಿಕೊಂಡು ಸೈಕಲ್ ನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಗವಲ್ಲಿ ನಿವಾಸಿ ರಂಗಣ್ಣ (70) ಹಾಗೂ ಅವರ ಮೊಮ್ಮಗ ರವೀಂದ್ರ (11) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯು ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.