ಗೋ ಸಂರಕ್ಷಣಾ ಸಂವರ್ಧನ ಸಮಿತಿ ಪ್ರತಿಭಟನೆತುಮಕೂರು
ತುಮಕೂರು: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಟರ ಅಮಾನವೀಯ ಕೃತ್ಯವನ್ನು ಖಂಡಿಸಿ ಹಾಗೂ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಸವನ ಬಾಲವನ್ನು ದ್ವೇಷದಲ್ಲಿ ಕೊಯ್ದದ್ದನ್ನು ಖಂಡಿಸಿ, ಇಂದು ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಗೋ ಸಂರಕ್ಷಣಾ ಸಂವರ್ಧನ ಸಮಿತಿ ತುಮಕೂರು ವತಿಯಿಂದ ಪ್ರತಿಭಟನೆಯನ್ನು ಮಾಡಲಾಯಿತು.
ಗೋವುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಹಲ್ಲೆ ನಿಲ್ಲಬೇಕು, ರಾಜ್ಯ ಸರ್ಕಾರ ಇದರ ಬಗ್ಗೆ ಗಮನವಹಿಸಿ ಗೋವುಗಳ ಮೇಲೆ ಹಲ್ಲೆ ಮಾಡುತ್ತಿರುವವರಿಗೆ ಸೂಕ್ತ ಶಿಕ್ಷೆ ನೀಡಬೇಕು, ಗೋ ಹತ್ಯೆ ಅಪರಾಧ ಎಂದು ತಿಳಿದಿದ್ದರೂ ಸಹ ಗೋಮಾಂಸಕ್ಕಾಗಿ ಗೋವುಗಳ ಹತ್ಯೆ ನಿಂತಿಲ್ಲ, ಸುಪ್ರೀಂ ಕೋರ್ಟ್ ಸ್ವತಃ ಗೋವುಗಳ ಹತ್ಯೆ ಮಾಡುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕೆಂದು ಆದೇಶ ನೀಡಿದೆ, ಆದರೂ ಗೋವುಗಳ ಹತ್ಯೆ ನಿಂತಿಲ್ಲ ಎಂದು ಹೇಳಿದರು.
ಚಾಮರಾಜಪೇಟೆಯಲ್ಲಿ ನಡೆದಿರುವಂತಹ ಘಟನೆ ಒಬ್ಬ ವ್ಯಕ್ತಿಯಿಂದ ನಡೆದಿರುವುದಲ್ಲ ,ಇದು ಮುಂಚೆಯೇ ಪ್ಲಾನ್ ಮಾಡಿ ಮಾಡಿರುವ ಘಟನೆ, ತನಿಖಾಧಿಕಾರಿಗಳ ದಿಕ್ಕು ತಪ್ಪಿಸಲು ಒಬ್ಬ ವ್ಯಕ್ತಿ ಮಾಡಿರುವ ಘಟನೆ ಎಂದು ನಂಬಿಸಲಾಗಿದೆ. ಹಾಗಾಗಿ ಇದರ ಬಗ್ಗೆ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ಒದಗಿಸಬೇಕು ಯಾವುದೇ ಕಾರಣಕ್ಕೂ ಬೇಲ್ ನೀಡಬಾರದು, ಮುಂದೊಂದು ದಿನ ಈ ರೀತಿ ಘಟನೆಗಳು ಮರುಕಳಿಸಿದಂತೆ ಸರ್ಕಾರ ಸರಿಯಾದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರದೀಪ್ ಆಗ್ರಹಿಸಿದರು
ಪ್ರತಿಭಟನೆಯಲ್ಲಿ ತುಮಕೂರು ನಗರ ಶಾಸಕ ಜೆ.ಬಿ ಜ್ಯೋತಿಗಣೇಶ್, ಚಿದಾನಂದ್ ಗೌಡ ಹಾಗೂ ಹಿಂದೂ ಸಂಘಟನೆಯ ಮುಖಂಡರುಗಳು, ಕಾರ್ಯಕರ್ತರು ಹಾಗೂ ಮತ್ತಿತರರು ಭಾಗವಹಿಸಿದ್ದರು.