ತುಮಕೂರು: KSRTC ಬಸ್‌ ಕಂಡಕ್ಟರ್‌ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ..!

ತುಮಕೂರು:

ಬೆಳಗಾವಿಯಲ್ಲಿ ನಡೆದ ಕೆಎಸ್ಆರ್ಟಿಸಿ ಬಸ್ಕಂಡಕ್ಟರ್ಮೇಲಿನ ಹಲ್ಲೆಗೆ ರಾಜ್ಯಾದ್ಯಂತ ಭಾರೀ ಖಂಡನೆ ವ್ಯಕ್ತವಾಗ್ತಿದೆ. ರಾಜ್ಯಾದ್ಯಂತ ಘಟನೆಯನ್ನು ಖಂಡಿಸಿ ಪ್ರತಿಭಟನೆಗಳು ಕೂಡ ನಡೆಯುತ್ತಿದ್ದು, ಇಂದು ತುಮಕೂರಿನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆಯನ್ನು ನಡೆಸಿ ತೀವ್ರ ಆಕ್ರೋಶ ಹೊರಹಾಕಿದರು.

ಕೆಎಸ್ಆರ್ಟಿಸಿ ನಿವೃತ್ತ ಕ್ಷೇಮಾಭಿವೃದ್ಧಿ ಟ್ರಸ್ಟ್, ಕನ್ನಡಪರ, ದಲಿತ ಮತ್ತು ರೈತ ಸಂಘಟನೆಗಳ ವತಿಯಿಂದ ಇಂದು ನಗರದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಯಿತು. ವೇಳೆ ಹಲ್ಲೆ ನಡೆಸಿದವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಜೊತೆಗೆ ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಮತ್ತು ಎಂಇಎಸ್ ಪುಂಡರನ್ನು ಗಡಿಪಾರು ಮಾಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನಾ ಮೆರವಣಿಗೆಯ ನಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ಪ್ರತಿಭಟನಾಕಾರರು, ತಮ್ಮ ಬೇಡಿಕೆಗಳನ್ನು ವ್ಯಕ್ತಪಡಿಸಿದರು. ಎಂಇಎಸ್ ಸಂಘಟನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದರು.

Author:

...
Editor

ManyaSoft Admin

Ads in Post
share
No Reviews