ತುಮಕೂರು : ಒಳಮೀಸಲಾತಿ ಜಾರಿಗೆ ದಲಿತ ಸಮುದಾಯದಿಂದ ಪ್ರತಿಭಟನೆ

ಡಿಸಿ ಕಛೇರಿ ಮುಂದೆ ದಲಿತಪರ ಸಂಘಟನೆಗಳ ಪ್ರತಿಭಟನೆ
ಡಿಸಿ ಕಛೇರಿ ಮುಂದೆ ದಲಿತಪರ ಸಂಘಟನೆಗಳ ಪ್ರತಿಭಟನೆ
ತುಮಕೂರು

ತುಮಕೂರು:

ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ, ದಲಿತ ಸಮುದಾಯದ ಮುಖಂಡರು ಹಾಗೂ ದಲಿತ ಪರ ಸಂಘಟನೆಗಳು ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಜಾರಿಗೆ ತರುವಂತೆ ಸುಪ್ರೀಂಕೋರ್ಟ್‌ ಆದೇಶ ನೀಡಿದ್ದರೂ ಕೂಡ ಸರ್ಕಾರ ಮಾತ್ರ ಇನ್ನು ಜಾರಿಗೆ ಮಾಡಿಲ್ಲ, ಹೀಗಾಗಿ ಕೂಡಲೇ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಇಂದು ತುಮಕೂರು ಡಿಸಿ ಕಚೇರಿ ಮುಂದೆ ನೂರಾರು ಮಂದಿ ದಲಿತ ಮುಖಂಡರು ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನೆಯಲ್ಲಿ ದಲಿತ ಪರ ಸಂಘಟನೆಯ ಜಿಲ್ಲಾಧ್ಯಕ್ಷ ಭರತ್ ಕುಮಾರ್, ದಲಿತ ಪರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಜಿಲ್ಲಾ ಉಪಾಧ್ಯಕ್ಷ ಕುಮಾರ್ ಹಾಗೂ ದಲಿತ ಮುಖಂಡರು ಭಾಗಿಯಾಗಿದ್ದರು. ಈ ವೇಳೆ ಸದಾಶಿವರವರ ಆಯೋಗದ ದತ್ತಾಂಶಗಳಿರುವ ವರದಿಯ ಶಿಫಾರಸ್ಸುಗಳನ್ನು ಬಳಸಿಕೊಂಡು ವರದಿ ತಯಾರಿಸಲು ಸರ್ಕಾರ ಆದೇಶ ನೀಡಬೇಕು, ಸಚಿವ ಸಂಪುಟವು ನಿರ್ಣಯಿಸಿದಂತೆ ಒಳಮೀಸಲಾತಿ ಜಾರಿಯಾಗುವವರೆಗೂ ಸರ್ಕಾರಿ ಉದ್ಯೋಗ ನೇಮಕಾತಿಗಳನ್ನು ತಡೆಹಿಡಿಯಬೇಕು ಎಂದರು.

ಅಲ್ಲದೇ ನಿಜವಾದ 49 ಅಲೆಮಾರಿಗಳನ್ನು ಪ್ರತ್ಯೇಕವಾಗಿ ಗುರುತಿಸಿ ಶೇ.1 ಕ್ಕಿಂತ ಹೆಚ್ಚು ಒಳಮೀಸಲಾತಿಯನ್ನು ನೀಡಿ ಪ್ರತ್ಯೇಕ ಅಭಿವೃದ್ಧಿ ಸ್ಥಾಪಿಸಬೇಕು ಎಂದು ದಲಿತ ಮುಖಂಡರು ಆಗ್ರಹಿಸಿದರು. ಕೂಡಲೇ ದಲಿತ ಸಮುದಾಯಕ್ಕೆ ನೀಡಬೇಕಾದ ಒಳ ಮೀಸಲಾತಿ ನೀಡಬೇಕೆಂದು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

Author:

share
No Reviews