ಅತೀ ವೇಗದಿಂದ ಚಲಾಯಿಸುತ್ತಿದ್ದ ಶಾಲಾ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಶಾಲಾ ವಾಹನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ತುಮಕೂರಿನ ಬಟವಾಡಿಯಲ್ಲಿರುವ ಶ್ರೀ ಗುರುಕುಲ ಶಾಲಾ ವಾಹನ ಇದಾಗಿದ್ದು, ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಶಾಲಾ ಮಕ್ಕಳನ್ನು ಮನೆಗೆ ಬಿಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಉಪ್ಪಾರಳ್ಳಿಯ ರಸ್ತೆಯಲ್ಲಿ ಚಲಿಸುವಾಗ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಹೈಮಾಸ್ಕ್ ವಿದ್ಯುತ್ ಕಂಬ ಮುರಿದುಬಿದ್ದಿದೆ. ವಿದ್ಯುತ್ ಕಂಬದಲ್ಲಿ ಕಳೆದ ಒಂದು ಗಂಟೆಯಿಂದ ವಿದ್ಯುತ್ ತೆಗೆಯಲಾಗಿತ್ತು ಆದ್ದರಿಂದ ಶಾಲಾ ವಾಹನದಲ್ಲಿದ್ದ ವಿದ್ಯಾರ್ಥಿಗಳು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ, ವಾಹನ ಚಾಲಕನ ನಿರ್ಲಕ್ಷದಿಂದ ಈ ಅಪಘಾತವಾಗಿದೆ ನಮ್ಮ ಮಕ್ಕಳ ಜೀವಕ್ಕೆ ಹೊಣೆ ಯಾರು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.....