ತುಮಕೂರು :
ತುಮಕೂರು ನಗರದ ಜಯಪುರದ ಜನರು ಎಂದಿನಂತೆ ಎದ್ದು ವಾಕಿಂಗ್ ಹೋಗಿದ್ದವರಿಗೆ ಜಯಪುರ ಮೈದಾನದಲ್ಲಿ ಮಧ್ಯದಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದ ದೇಹವು ಕೊಲೆಯಾದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿದೆ.
ಯಾರೋ ದುಷ್ಕರ್ಮಿಗಳು ಯುವಕನ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಲೆ ಭಾಗ ಸೇರಿ ದೇಹದ ಹಲವು ಕಡೆ ಗಾಯದ ಗುರುತುಗಳು ಪತ್ತೆಯಾಗಿವೆ. ಮೃತದೇಹವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ತಿಲಕ್ ಪಾರ್ಕ್ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ತುಮಕೂರು ಎಸ್ ಪಿ ಅಶೋಕ್ ವೆಂಕಟ್ ಕೂಡ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ಮೃತ ಯುವಕನ ಗುರುತು ಇನ್ನು ಪತ್ತೆಯಾಗಿಲ್ಲ. ಬೇರೆಲ್ಲೋ ಕೊಲೆ ಮಾಡಿ ಇಲ್ಲಿ ತಂದು ಹಾಕಿರುವ ಶಂಕೆ ಕೂಡ ವ್ಯಕ್ತವಾಗಿದೆ. ಸದ್ಯ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ತಿಲಕ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.