ತುಮಕೂರು: ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ತುಮಕೂರು:

ರೈಲು ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಹಿರೇಹಳ್ಳಿಯಲ್ಲಿರುವ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದೆ. ಈ ದಾರುಣ ಘಟನೆಯಲ್ಲಿ 55 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಮೃತರು ಹಳಿದಾಟುವ ಸಂದರ್ಭದಲ್ಲಿ ಎಚ್ಚರವಿಲ್ಲದೆ ರೈಲಿಗೆ ಸಿಲುಕಿದ್ದು, ತೀವ್ರ ಗಾಯಗಳಿಂದ ಕೂಡಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಇನ್ನು ಈ ಘಟನೆಯ ಮಾಹಿತಿ ಪಡೆದ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Author:

...
Editor

ManyaSoft Admin

Ads in Post
share
No Reviews