ತುಮಕೂರು :
ತುಮಕೂರಿನಲ್ಲಿ ಇನ್ನು ನಿದ್ದೆ ಕಣ್ಣಿನಲ್ಲಿದ್ದ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಭ್ರಷ್ಟರನ್ನು ಬೆಚ್ಚಿ ಬೀಳಿಸಿದ್ದಾರೆ. ಲೋಕಾಯುಕ್ತ ದಾಳಿಗೆ ಅಧಿಕಾರಿಗಳು ಕಂಗಾಲಾಗಿದ್ದಾರೆ. ಆಗಿನ್ನು ಬೆಡ್‌ನಿಂದ ಎದ್ದು ಕಣ್ಣುಜ್ಜುವಷ್ಟರಲ್ಲಿಯೇ ಅಧಿಕಾರಿಗಳಿಗೆ ಶಾಕ್ ಎದುರಾಗಿದೆ. ಅಕ್ರಮ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ತುಮಕೂರಿನಾದ್ಯಂತ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿಗೆ ಅಧಿಕಾರಿಗಳು ಪದರುಗುಟ್ಟಿ ಹೋಗಿದ್ದಾರೆ.
ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ರಾಜಶೇಖರ್ ಅವರ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ದಾಳಿ ನಡೆಸಿ ಪರಿಶೀಲನೆಗೆ ಮುಂದಾಗಿದ್ದಾರೆ. ತುಮಕೂರಿನ ಅಶೋಕ್ ನಗರದಲ್ಲಿರುವ ಅವರ ನಿವಾಸ, ಎಸ್ಐಟಿ 4ನೇ ಕ್ರಾಸ್‌ನಲ್ಲಿ ಇರುವ ಅವರ ಸಹೋದರನ ಮನೆ, ಜೊತೆಗೆ ಬೆಂಗಳೂರಿನಲ್ಲಿರುವ ಇನ್ನೊಂದು ಮನೆ ಸೇರಿ ಒಟ್ಟು 6 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ತುಮಕೂರು ಲೋಕಾಯುಕ್ತ ಎಸ್‌ಪಿ ಲಕ್ಷ್ಮಿನಾರಾಯಣ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ಲೋಕಾಯುಕ್ತ ದಾಳಿಯಲ್ಲಿ ಸುಮಾರು 15ಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದರು. ರಾಜಶೇಖರ್ ಅವರಿಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಈಗಾಗಲೇ ಮಹತ್ವದ ದಾಖಲೆಗಳು, ಆಸ್ತಿ ವಿವರಗಳು ಹಾಗೂ ಹಣಕಾಸು ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ.
ಇನ್ನು ಅಕ್ರಮವಾಗಿ ಸರ್ಕಾರದ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ರಾಜಶೇಖರ್ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಕಾರಣಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.