ತುಮಕೂರು: ಮೂಲಭೂತ ಸೌಕರ್ಯಕ್ಕಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

ಗ್ರಾಮ ಆಡಳಿತ ಅಧಿಕಾರಿಗಳು ಡಿಸಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವುದು.
ಗ್ರಾಮ ಆಡಳಿತ ಅಧಿಕಾರಿಗಳು ಡಿಸಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವುದು.
ತುಮಕೂರು

ತುಮಕೂರು:

ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ  ತುಮಕೂರು ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಇಂದು ಡಿಸಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ. ಈ ಹಿಂದೆ ಸರ್ಕಾರ ಹಲವು ಭರವಸೆಗಳನ್ನು ನೀಡಿತ್ತು, ಆದರೆ ಸರ್ಕಾರ ಈವರೆಗೂ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಹೀಗಾಗಿ ಮೂರು ದಿನ ತಾಲೂಕು ಹಂತದಲ್ಲಿ, ಮೂರು ದಿನ ಜಿಲ್ಲಾ ಹಂತದಲ್ಲಿ ಅಂತಿಮವಾಗಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆಯನ್ನು ಕೈಗೊಂಡಿದ್ದಾರೆ. ಹೌದು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಿಗಬೇಕಾದ ಯಾವ ಸೌಲಭ್ಯವೂ ಸಿಗ್ತಾ ಇಲ್ಲ. ಕೂಡಲೇ ನಮಗೆ ಬೇಕಾದ ಮೂಲಭೂತ ಸೌಕರ್ಯವನ್ನು ಒದಗಿಸುವಂತೆ ಪ್ರತಿಭಟನೆ ಮೂಲಕ ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ, ಸರ್ಕಾರದಿಂದ ಸಿಗಬೇಕಾದ ಮೂಲಭೂತ ಸೌಕರ್ಯಗಳು ನಮಗೆ ಸಿಗುತ್ತಿಲ್ಲ, ಕಳೆದ ಬಾರಿಯೂ ನಾವು ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದೆವು. ಆದರೆ ಸರ್ಕಾರ ನಮಗೆ ಯಾವುದೇ ರೀತಿಯ ಪರಿಹಾರ ಒದಗಿಸದೆ ಹಾಗೂ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ, ಈ ಬಾರಿಯೂ ಕೂಡ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ಮುಂದುವರಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಆಡಳಿತ ಇಲಾಖೆಯ ಸಿಬ್ಬಂದಿ ಮಾತನಾಡಿ, ನಮಗೆ ಸರಿಯಾದ ರೀತಿಯ ಕಚೇರಿ ಇಲ್ಲ, ಶೌಚಾಲಯವಿಲ್ಲ, ಆದರೆ ಸರ್ಕಾರ ನಮಗೆ ಕೆಲಸ ಮಾತ್ರ ಬೇಗ ಮುಗಿಸಬೇಕು ಸರಿಯಾದ ರೀತಿಯಲ್ಲಿ ಆಗ್ಬೇಕು ಅಂತ ಕೆಲಸದ ಒತ್ತಡ ಮಾತ್ರ ಹಾಕ್ತಾರೆ ಎಂದು ಕಿಡಿಕಾರಿದರು. ಅಲ್ಲದೇ ನಮ್ಮ ಅನಿರ್ದಿಷ್ಟಾವಧಿ ಮುಷ್ಕರದಿಂದ ರೈತರಿಗೆ ಸಾರ್ವಜನಿಕರಿಗೆ ತೊಂದರೆ ಆಗ್ತಾ ಇದ್ರೆ ದಯವಿಟ್ಟು ನಮ್ಮನ್ನು ಕ್ಷಮಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿರುವುದರಿಂದ ನಾವು ಮುಷ್ಕರ ನಡೆಸುತ್ತಿದ್ದೇವೆ. ನಮಗೆ ರೈತರಿಗೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ಯಾವುದೇ ಉದ್ದೇಶವಿಲ್ಲ ಎಂದರು.

ಇತ್ತ ಶಿರಾದಲ್ಲೂ ಗ್ರಾಮ ಆಡಳಿತ ಅಧಿಕಾರಿಗಳು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಕೂಡಲೇ ಸರ್ಕಾರ ನಮ್ಮ ಇಲಾಖೆಗೆ ನೀಡಬೇಕಾದ ಸೌಲಭ್ಯವನ್ನು ನೀಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

 

Author:

...
Editor

ManyaSoft Admin

Ads in Post
share
No Reviews