ಕೃಷಿ ಪತ್ತಿನ ಸಹಕಾರ ಸಂಘ ಸಂಭ್ರಮಾಚಾರಣೆತುಮಕೂರು
ತುರುವೇಕೆರೆ :
ತುರುವೇಕೆರೆ ತಾಲೂಕಿನ ತಾಳಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಪಿ.ಎಲ್.ನವೀನ್ ಕುಮಾರ್, ಉಪಾದ್ಯಕ್ಷರಾಗಿ ಶಿವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಗಳಿಗೆ ಒಂದೊಂದೆ ನಾಮ ಪತ್ರ ಸಲ್ಲಿಕೆಯಾದ ಹಿನ್ನಲೇ ಚುನಾವಣಾದಿಕಾರಿ ಸಿಡಿಓ ಶ್ರೀನಿವಾಸ್ ಪಿ.ಎಲ್.ನವೀನ್ ಕುಮಾರ್ ಅವರನ್ನು ಅವಿರೋಧವೆಂದು ಘೋಷಿಸಿದರು. ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವೇಳೆ ಸಹಕಾರ ಸಂಘದ ನಿರ್ದೇಶಕರಾದ ಶಿವಸ್ವಾಮಿ, ಜಿತೇಂದ್ರ, ಸವಿತಾ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಲಿಂಗಪ್ಪ, ಮುಖಂಡರಾದ ಹುಚ್ಚೇಗೌಡ, ಸೇರಿದಂತೆ ಇತರರು ಅವಿರೋಧವಾಗಿ ಆಯ್ಕೆಯಾದವರನ್ನು ಅಭಿನಂದಿಸಿದರು.
ನೂತನ ಅಧ್ಯಕ್ಷ ಪಿ.ಎಲ್.ನವೀನ್ ಕುಮಾರ್ ಮಾತನಾಡಿ ತನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲ ನಿರ್ದೇಶಕರಿಗೆ ಧನ್ಯವಾದಗಳನ್ನು ತಿಳಿಸಿ ಸಹಕಾರ ಸಂಘದಿಂದ ರೈತರಿಗೆ ಸಿಗುವಂತಹ ಸವಲತ್ತುಗಳನ್ನು ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.