ಬೆಂಗಳೂರು : ಮಾರಕಾಸ್ತ್ರ ಹಿಡಿದು ವ್ಹೀಲಿಂಗ್ ಮಾಡ್ತಿದ್ದ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು :

ಮಾರಕಾಸ್ತ್ರಗಳನ್ನು ಹಿಡಿದು ಬೈಕ್‌ ನಲ್ಲಿ ವ್ಹೀಲಿಂಗ್‌ ಮಾಡಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ ನಡೆದಿದೆ. ಮಹೇಶ್‌ (19)  ಹಾಗೂ ಮಂಜುನಾಥ್‌ (19) ಎಂಬುವರು ಬಂಧಿತ ಆರೋಪಿಗಳಾಗಿದ್ದಾರೆ.

ಔಟರ್‌ ರಿಂಗ್‌ ರಸ್ತೆಯಲ್ಲಿ  ಚೌಡೇಶ್ವರಿನಗರ ಬಸ್‌ ನಿಲ್ದಾಣದ ಬಳಿ ಮಾರಕಾಸ್ತ್ರವನ್ನು ರಸ್ತೆಯಲ್ಲಿ ಹಿಡಿದು ಸ್ಕೂಟರ್‌ ನಲ್ಲಿ ವ್ಹೀಲಿಂಗ್‌ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದನ್ನು ಗಂಭೀರವಾಗಿ ತೆಗೆದುಕೊಂಡ ಸಂಚಾರಿ ಠಾಣೆ ಪೊಲೀಸರು ,ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

 

Author:

share
No Reviews