HAVERI: ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನಿಧನ

ಹಾವೇರಿ: 

ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕರನ್ನು ಪ್ರಜ್ವಲ್ ದೇವರಮನಿ [15] ಮತ್ತು ಸನತ್ ಭೂಸರೆಡ್ಡಿ [14] ಎಂದು ಗುರುತಿಸಲಾಗಿದೆ. 

ಸೈಕಲ್ ತೆಗೆದುಕೊಂಡು ಕೆರೆಗೆ ಈಜಲು ಹೋಗಿದ್ದ ಇಬ್ಬರುಬಾಲಕರು ಸೈಕಲ್ ಅನ್ನು ಕೆರೆಯ ದಡದಲ್ಲಿ ಬಿಟ್ಟು ಈಜಲು ಹೋಗಿದ್ದಾರೆ. ಕೆರೆಗಿಳಿದ ಸಂದರ್ಭ ಈಜಲು ಬಾರದೇ ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೆರೆಯ  ದಡದಲ್ಲಿ   ಸೈಕಲ್ ಹಾಗೂ ಬಟ್ಟೆಗಳು ಇರುವುದನ್ನು ನೋಡಿದಸ್ಥಳೀಯರು ಕೆರೆಯಲ್ಲಿ ಬಾಲಕರು ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ.ಘಟನಾ  ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು  ಓರ್ವ ಬಾಲಕನ ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ. 

ಇನ್ನುಘಟನಾ ಸ್ಥಳಕ್ಕೆ ಶಿಗ್ಗಾಂವಿ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕೆರೆಯಲ್ಲಿ ಪ್ರಜ್ವಲ್ ಮೃತದೇಹ ಪತ್ತೆಯಾಗಿದ್ದು, ಹೊರತೆಗೆದಿದ್ದಾರೆ.

ಮತ್ತೋರ್ವ  ಬಾಲಕನ ಮೃತದೇಹ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.ಸ್ಥಳಕ್ಕೆ ಹುಲಗೂರು ಠಾಣೆಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಪ್ರಕರಣ ಹುಲಗೂರು ಪೋಲೀಸ್‌ ಠಾಣಾ ವ್ಯಾಪ್ತಿಯಲ್ಲಿ   ನಡೆದಿದೆ.  

 

 

Author:

...
Sub Editor

ManyaSoft Admin

share
No Reviews