ವಿಜಯನಗರ : ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು..!

ವಿಜಯನಗರ :

ಕೆರೆಯಲು ಈಜಲು ಹೋಗಿದ್ದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನ ಹೊಸಕೇರಿಯಲ್ಲಿ ನಡೆದಿದೆ

ವಿರೇಶ್‌ (12) ಹಾಗೂ ವಿನಯ್‌ (12) ಮೃತ ಬಾಲಕರಾಗಿದ್ದಾರೆ. ಇಬ್ಬರು ಬಾಲಕರು ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಾಲಕರ ಶವಗಳನ್ನು ಹೊರತೆಗೆದಿದ್ದಾರೆ.  

ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಗರಿಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author:

share
No Reviews