ಹೊಸಕೋಟೆ : ಬೈಕ್ ಗೆ ಟೆಂಪೋ ಡಿಕ್ಕಿ | ಸ್ಥಳದಲ್ಲೇ ಇಬ್ಬರ ಸಾವು

ಹೊಸಕೋಟೆ :

ದ್ವಿಚಕ್ರ ವಾಹನಕ್ಕೆ ಟೆಂಪೋ ಡಿಕ್ಕಿ ಹೊಡೆದು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಚಿಕ್ಕಹುಲ್ಲೂರು ಬಳಿ ನಡೆದಿದೆ.

ಮೂವರು ಯುವಕರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಹೊಸಕೋಟೆ ಬಳಿಯ ಚಿಕ್ಕಹುಲ್ಲೂರು ಬಳಿ ಚಲಿಸುತ್ತಿದ್ದ ಬೈಕ್‌ ಗೆ ಡಿಕ್ಕಿ ಟೆಂಪೋ ಹೊಡೆದ ರಭಸಕ್ಕೆ ಬೈಕ್‌ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಟೆಂಪೋ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರವಾಹನ ಸಂಪೂರ್ಣ ನಜ್ಜು ಗುಜ್ಜಾಗಿದೆ.  

ಸದ್ಯ ವಿಷಯ ತಿಳಿದು ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews