ಶಿವಮೊಗ್ಗ :
ಕಾರು ಹಾಗೂ ಟಿಪ್ಪರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಕಾರು ಚಾಲಕ ಸೇರಿದಂತೆ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ರಸ್ತೆಯ ಬೈರಾಪುರ ಬಳಿ ನಡೆದಿದೆ. ಶಿಕಾರಿಪುರ ತಾಲೂಕಿನ ಹಿತ್ತ ಗ್ರಾಮದ ನಿವಾಸಿ ಮಹಮ್ಮದ್ ಹಾಗೂ ಫರೀನಾ ಎಂಬುವರು ಮೃತ ದುರ್ದೈವಿಗಳಾಗಿದ್ದಾರೆ.
ಗೋವಾದಲ್ಲಿ ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಶಿಕಾರಿಪುರದಿಂದ ಆನಂದಪುರ ಕಡೆ ತೆರಳುತ್ತಿದ್ದ ಟಿಪ್ಪರ್ ವಾಹನ ಆನಂದಪುರ ಕಡೆಯಿಂದ ಬರ್ತಿದ್ದ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಮೃತಪಟ್ಟರೆ, ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿದೆ. ಅಲ್ದೇ ಟಿಪ್ಪರ್ ಚಾಲಕ ತೀವ್ರ ಗಾಯಗೊಂಡಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.