KALAGHATAGI : ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ದೇವಿಕೊಪ್ಪ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಲಘಟಗಿ ತಾಲ್ಲೂಕಿನ ದೇವಿಕೊಪ್ಪ ಗ್ರಾಮದದವರು ಕುಂದಗೋಳ ತಾಲ್ಲೂಕಿನ ಯಳಿವಾಳ ಗ್ರಾಮದಲ್ಲಿ ಮದುವೆ ಸಮಾರಂಭ ಮುಗಿಸಿಕೊಂಡು ಕ್ರೂಸರ್ ವಾಹನದಲ್ಲಿ ವಾಪಸ್ ಗ್ರಾಮಕ್ಕೆ ತೆರಳ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಸಾವನ್ನಪಿದ್ದು, 10 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕೂಡಲೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಸದ್ಯ ಈ ಸಂಬಂಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.