ಯಾದಗಿರಿ : ಈಜಲು ಹೋಗಿದ್ದ ಆರು ಕುರಿಗಾಹಿಗಳಲ್ಲಿ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರ ಗ್ರಾಮದ ಬಳಿಯ ಬಸವಸಾಗರ ಜಲಾಶಯದ ಜಿಬಿಸಿ ಕಾಲುವೆಯಲ್ಲಿ ನಡೆದಿದೆ. ವಿಜಯಪುರ ಮೂಲದ ಜಟ್ಟೆಪ್ಪ (19) ಕರಿಯಪ್ಪ (19) ಎಂಬುವರು ಮೃತ ದುರ್ದೈವಿಗಳಾಗಿದ್ದಾರೆ
ಕುರಿ ಮೇಯಿಸಲು ಬಂದ ಆರು ಮಂದಿಯ ಗುಂಪು ಬಸವಸಾಗರ ಜಲಾಶಯದ ಜಿಬಿಸಿ ಕಾಲುವೆಯಲ್ಲಿ ಈಜಲು ಇಳಿದಿದ್ದಾರೆ, ಈ ವೇಳೆ ಇಬ್ಬರು ಯುವಕರು ಏಕಾಏಕಿ ನೀರಿನಲ್ಲಿ ಕೊಚ್ಚಿ ಹೋಗಿದ್ದು, ನಾಲ್ವರು ಸುರಕ್ಷಿತವಾಗಿ ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಮೃತರಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ನೀರು ಪಾಲಾದ ಕುರಿಗಾಹಿಗಳಿಗಾಗಿ ಕಾಲುವೆಯಲ್ಲಿ ಶೋಧ ನಡೆಸುತ್ತಿದ್ದಾರೆ.
ಈ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.