ಬೆಂಗಳೂರು:
ಕಾವೇರಿ ನಿವಾಸದಲ್ಲಿ ನಡೆದ ವಿಡಿಯೋ ಕಾನ್ಪರೆನ್ಸ್ ಮೂಲಕ ಇನ್ನು ಮುಂದೆ ಯಾವುದೇ ಅನಧೀಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಸ್ಥಳೀಯ ಸಂಸ್ಥೆಗಳ ಆಯುಕ್ತರು , ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಇ ಖಾತಾ ನೀಡುವ ಕುರಿತು ಜಿಲ್ಲಾಧಿಕಾರಿಗಳು, ಯೋಜನಾ ನಿರ್ದೇಶಕರು, ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು ಹಾಗೂ ಮುಖ್ಯಾಧಿಕಾರಿಗಳ ಜೊತೆ ಸಭೆ ನಡೆಸಿದರು.
ಸಭೆಯಲ್ಲಿ ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿಯಲ್ಲಿರುವ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ನೀಡುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು. ಅಧಿಕಾರಿಗಳು ಇದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಎಂದರು, ಅನಧೀಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ, ಇದರಿಂದ ಜನರಿಗೆ ನಾಗರೀಕ ಸವಲತ್ತೂಗಳು ಸಿಗುತ್ತಿಲ್ಲ ಆದ್ದರಿಂದ ನಿಮಗೆ 3 ತಿಂಗಳು ಟೈಮ್ ನೀಡಿದ್ದೇನೆ, ಅಷ್ಟರಲ್ಲಿ ಅಭಿಯಾನ ನಡೆಸಿ ಪೂರ್ಣಗೊಳಿಸಿ ಎಂದರು. ಅನಧಿಕೃತ ಬಡಾವಣೆಗಳು ಮತ್ತೆ ತಲೆ ಎತ್ತಿದರೆ ಜಿಲ್ಲಾಧಿಕಾರಿ, ಮುಖ್ಯ ಅಧಿಕಾರಿ, ನಗರ ಯೋಜನಾ ಅಧಿಕಾರಿಗಳು ಜವಾಬ್ದಾರಿ ಆಗ್ತೀರಿ. ನಿಮ್ಮ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ. ಮಧ್ಯವರ್ತಿಗಳಿಗೆ, ಬ್ರೋಕರ್ಗಳಿಗೆ ತಕ್ಷಣ ಗೇಟ್ ಪಾಸ್ ಕೊಡಿ. ಇದನ್ನು ಮತ್ತು ಕಾಯ್ದೆಯ ದೂರದೃಷ್ಟಿಯನ್ನು ನೀವೆಲ್ಲರೂ ಸ್ಪಷ್ಟವಾಗಿ, ಖಚಿತವಾಗಿ ಅರ್ಥ ಮಾಡಿಕೊಳ್ಳಿ ಎಂದು ಸೂಚಿಸಿದರು.
ರಾಜ್ಯದಲ್ಲಿ ಎಲ್ಲೂ ಅನಧಿಕೃತ ಬಡಾವಣೆಗಳು, ರೆವಿನ್ಯೂ ಬಡಾವಣೆಗಳು ತಲೆ ಎತ್ತಬಾರದು, ಒಟ್ಟಾರೆಯಾಗಿ ಬಡವರು, ಮಧ್ಯಮ ವರ್ಗದವರಿಗೆ ಅನುಕೂಲವಾಗಬೇಕು ಎಂದರು. ಹೊಸ ಗೊಂದಲಗಳಿಗೆ ಅವಕಾಶ ನೀಡಬೇಡಿ ಎಂದರು. ಇ-ಖಾತಾ ಇವತ್ತಿನಿಂದಲೇ ಕೊಡಲು ಶುರು ಮಾಡಿ ಎಂದು ಸೂಚನೆ ನೀಡಿದರು.