ಗುಬ್ಬಿ:
ಗುಬ್ಬಿ ತಾಲೂಕು ನಿಟ್ಟೂರಿನ ಅಮಾನಿಕೆರೆಯ ಖಾಸಗಿ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ಅಪರಿಚಿತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತೆಂಗಿನ ಮರವನ್ನು ಹತ್ತಿ ಸಾರ್ವೆ ಹಗ್ಗದಿಂದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಕ್ಕದ ಜಮೀನಿನ ಮಾಲೀಕರು ಮಾಹಿತಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಇಳಿಸುವ ಕೆಲಸ ಮಾಡಿದ್ರು.
ಅಪರಿಚಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರೋದಕ್ಕೆ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಅಪರಿಚಿತನ ಗುರುತು ಪತ್ತೆಗಾಗಿ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ. ಸದ್ಯ ಅಪರಿಚಿತ ವ್ಯಕ್ತಿಯ ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಗುಬ್ಬಿ ಪಿಎಸ್ಐ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರಮ ಕೈಗೊಂಡಿದ್ದಾರೆ. ಜೊತೆಗೆ ವಾರಸುದಾರರ ಪತ್ತೆಗೆ ಮುಂದಾಗಿದ್ದಾರೆ.