ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಳೆದ ನಾಲ್ಕು ದಿನಗಳಿಂದ ಸ್ವಲ್ಪ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು. ಇದೀಗ ಅಗತ್ಯ ಚಿಕಿತ್ಸೆ ಹಿನ್ನೆಲೆಯಲ್ಲಿ ಇಂದು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
ತೀವ್ರ ಜ್ವರ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು, ಸ್ವಲ್ಪ ದಿನದಿಂದ ಮತ್ತೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಚೆನ್ನೈಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಕೂಡ ಕುಮಾರಸ್ವಾಮಿಯವರು ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಹೃದಯಕ್ಕೆ ಸಂಬಂಧಿತ ಚಿಕಿತ್ಸೆ ಪಡೆದುಕೊಂಡಿದ್ದರು.
ಕುಮಾರಸ್ವಾಮಿಯವರು ಕೇಂದ್ರ ಸಚಿವರಾದ ಬಳಿಕ ನಿರಂತರವಾಗಿ ಪ್ರವಾಸ ಹಾಗೂ ಕೆಲಸದ ಒತ್ತಡದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಆಪ್ತರು ತಿಳಿಸಿದ್ದಾರೆ. ಇನ್ನೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಗ್ಯದ ಕುರಿತು ಊಹಪೋಹಗಳು ಕೇಳಿ ಬಂದಿದ್ದು, ಈ ಕುರಿತು ಹೆಚ್ ಡಿ ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ ಎಂದು ಅವರ ಆಪ್ತ ವಲಯದಿಂದ ಮಾಹಿತಿ ತಿಳಿದು ಬಂದಿದೆ