ಉತ್ತರಪ್ರದೇಶ : ಬೈಕ್ ಓಡಿಸುತ್ತಿದ್ದಾಗಲೇ ಹೃದಯಾಘಾತ | ಯುವಕ ಸಾವು

ಉತ್ತರಪ್ರದೇಶ :

ಸಾವು ಮನುಷ್ಯನಿಗೆ ಹೇಗೆ ಯಾವಾಗ ಯಾವ ರೂಪದಲ್ಲಿ ಬರುತ್ತೇ ಅನ್ನೋದನ್ನು ಊಹಿಸಲು ಸಾಧ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಯುವಪೀಳಿಗೆಯಿಂದ ಹಿಡಿದು ದೊಡ್ಡವರವರೆಗೂ ಹೃದಯಾಘಾತಕ್ಕೆ ಸಾಕಷ್ಟು ಜನರು ತಮ್ಮ ಪ್ರಾಣವನ್ನು ಕಳೆದುಕೊಳ್ಳುವವ್ ಸಂಖ್ಯೆ ಹೆಚ್ಚಾಗ್ತಾನೆ ಇದೆ. ಯುಬಕನೊಬ್ಬ ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ ನ ಕತ್‌ ಘರ್‌ ಎಂಬಲ್ಲಿ ನಡೆದಿದೆ.

ಯುವಕನೊಬ್ಬ ಬೈಕ್‌ ನಲ್ಲಿ ಚಲಿಸುತ್ತಿರುವಾಗಲೇ ಏಕಾಏಕಿ ಕುಸಿದು ಬಿದ್ದು ಒದ್ದಾಡಿದ್ದಾನೆ. ಕೂಡಲೇ ಸಾರ್ವಜನಿಕರು ಗಮನಿಸಿ ಯುವಕನ ಪ್ರಾಣ ಉಳಿಸುವ ಪ್ರಯತ್ನ ಮಾಡಿದದ್ದು, ಅಲ್ದೇ ಸಿಪಿಆರ್‌ ಮಾಡಿ ಅವನನ್ನು ಉಳಿಸಲು ಪ್ರಯತ್ನಿಸಿದರೂ ಸಾಧ್ಯವಾಗದೇ ಇದ್ದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇನ್ನು ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗ್ತಿದೆ.

Author:

...
Sushmitha N

Copy Editor

prajashakthi tv

share
No Reviews